ಬೆಂಗಳೂರು: ವೃತ್ತಿಪರ ಕೋರ್ಸ್ ಸೀಟು ಹಂಚಿಕೆಗೆ ಈ ವರ್ಷ ಕೇವಲ ಸಿಇಟಿ ಪರೀಕ್ಷೆಯ ಅಂಕಗಳೇ ಮಾನದಂಡವನ್ನಾಗಿ ಪರಿಗಣಿಸಲು ಉನ್ನತ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಸಿಇಟಿ ಪರೀಕ್ಷೆ ಸಂಬಂಧ ಇಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಅಶ್ವತ್ಥನಾರಾಯಣ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು. ಸೀಟು ಹಂಚಿಕೆಗೆ ಈ ವರ್ಷ ಪಿಯುಸಿಯ ಶೇ.50 ಅಂಕ ಪರಿಗಣಿಸದೇ ಇರಲು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.
Advertisement
Advertisement
ನಿಗದಿಯಂತೆ ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳು ಜಾಸ್ತಿಯಾದರೆ ಮಾತ್ರ ದಿನಾಂಕವನ್ನು ಮುಂದೂಡಲು ಇಲಾಖೆ ಮುಂದಾಗಿದೆ. ಇದನ್ನೂ ಓದಿ : ಜಿಲ್ಲಾ ಪ್ರವಾಸಕ್ಕೂ ಮುನ್ನವೇ ಸಿಎಂ ಅನ್ಲಾಕ್ ಘೋಷಣೆ?
Advertisement
ಸಭೆಯಲ್ಲಿ ಸಿಇಟಿ ಪರೀಕ್ಷೆ ಬರೆಯಲು ಇದ್ದ ಅರ್ಹತೆ ಅಂಕಗಳ ಮಾನದಂಡ ಬದಲಾವಣೆಗೂ ನಿರ್ಧಾರ ಮಾಡಲಾಗಿದೆ. ಈ ವರ್ಷ ಗ್ರೇಡ್ ಆಧಾರದಲ್ಲಿ ಪಿಯುಸಿ ಫಲಿತಾಂಶ ನೀಡುತ್ತಿರುವ ಕನಿಷ್ಠ ಅಂಕಗಳ ಮಾನದಂಡ ನಿಯಮ ಸಡಿಲಿಕೆ ಮಾಡಲಾಗಿದ್ದು ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ ನೀಡಲಾಗಿದೆ.
Advertisement
ಪಿಯುಸಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳು ಸಿಇಟಿ ಬರೆಯಲು ಕನಿಷ್ಠ ಶೇ.40-45 ಅಂಕ ಕಡ್ಡಾಯವಾಗಿ ಪಡೆಯಬೇಕಿತ್ತು. ಈ ಅಂಕಗಳನ್ನು ಪಡೆಯದೇ ಇದ್ದಲ್ಲಿ ಸಿಇಟಿ ಬರೆಯಲು ಅರ್ಹತೆ ಪಡೆಯುತ್ತಿರಲಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ, ಸಾಮಾನ್ಯ ವಿದ್ಯಾರ್ಥಿಗಳಿಗೆ ಕನಿಷ್ಠ ಅಂಕ ನಿಯಮ ನಿಗದಿ ಮಾಡಲಾಗಿತ್ತು.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಆಯುಕ್ತ ಪ್ರದೀಪ್, ಕೆಇಎ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಮೊದಲನೇ ವರ್ಷದ/ ಮೊದಲನೇ ಸೆಮಿಸ್ಟರ್ ನ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನದ ಕೋರ್ಸ್ಗಳು ಮತ್ತು ಬಿ-ಫಾರ್ಮಾ-ಡಿ ಕೋರ್ಸ್ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.