ಬೆಂಗಳೂರು: ಈ ವರ್ಷ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಡಿ.16 ನನ್ನ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
Advertisement
ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು ಎಂದು ಹೇಳಿದ್ದಾರೆ.
Advertisement
ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ.
2/2
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 14, 2020
Advertisement
ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ ಎಂದು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.
Advertisement