ಉಡುಪಿ: ಜಿಲ್ಲೆಯಾದ್ಯಂತ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದೆ. ಉಡುಪಿ ಜಿಲ್ಲೆಗೆ 16,500 ಡೋಸೇಜ್ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ಆಗಮಿಸಿದೆ. ಜಿಲ್ಲೆ ಉಡುಪಿ ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ಕಾಲೇಜುಗಳಲ್ಲಿ ವ್ಯಾಕ್ಸಿನೇಷನ್ ನಡೆಯುತ್ತಿದೆ.
ಮೊದಲ ದಿನ ಜಿಲ್ಲೆಯಲ್ಲಿ 6,000 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ಹಾಕಿಸಲಾಗಿತ್ತು. ನಗರದ ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಳಗ್ಗೆಯಿಂದಲೇ ವ್ಯಾಕ್ಸಿನೇಶನ್ ಪ್ರಕ್ರಿಯೆ ಆರಂಭಗೊಂಡಿದೆ. ಮೊದಲ ದಿನ 700 ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವ್ಯಾಕ್ಸಿನೇಷನ್ ನೀಡಲಾಗಿತ್ತು. ಇಂದು ಸುಮಾರು 750 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದೆ.
Advertisement
Advertisement
ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ರಿಜಿಸ್ಟ್ರೇಷನ್ ಕೌಂಟರ್, ವೈಟಿಂಗ್ ರೂಮ್, ವ್ಯಾಕ್ಸಿನೇಷನ್ ಕೊಠಡಿ ನಿರ್ಮಾಣ ಮಾಡಲಾಗಿದ್ದು, ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
Advertisement
Advertisement
ಸರ್ಕಾರದ ಈ ಕೆಲಸ ಬಹ ಬಹಳ ಉತ್ತಮವಾಗಿದೆ. ಉಚಿತವಾಗಿ ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಷನ್ ಮಾಡುತ್ತಿರುವುದು ನಮಗೆ ಬಹಳ ಖುಷಿಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ವ್ಯಾಕ್ಸಿನೇಷನ್ ಮಾಡಿಸಿಕೊಳ್ಳಬೇಕಾದರೆ ಹಣ ಕೊಡಬೇಕಾಗಿತ್ತು. ಮೂರನೇ ಅಲೆಯ ಆತಂಕ, ಡೆಲ್ಟಾ ಪ್ಲಸ್ ಆತಂಕದ ವಾತಾವರಣ ಇರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಸಾರ್ವಜನಿಕರು ವ್ಯಾಕ್ಸಿನ್ ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿನಿ ಸಿಂಚನ ಅಭಿಪ್ರಾಯ ವ್ಯಕ್ತಪಡಿಸಿದರು.
ಕಳೆದ ಎರಡು ತಿಂಗಳು ಮನೆಯಲ್ಲೇ ಇದ್ದೆವು. ವ್ಯಾಕ್ಸಿನೇಷನ್ ಮಾಡಿಸುತ್ತಿದ್ದಾರೆ. ಕಾಲೇಜು ಆರಂಭವಾದರೆ ಧೈರ್ಯದಿಂದ ಕಾಲೇಜಿಗೆ ಬರಬಹುದು. ಸರ್ಕಾರ ಕಾಲೇಜಿನಲ್ಲಿ ಉಚಿತವಾಗಿ ವ್ಯಾಕ್ಸಿನ್ ಕೊಡುತ್ತಿರೋದು ಬಡವರಿಗೆ ಬಹಳ ಉಪಕಾರಿಯಾಗಿದೆ ಎಂದು ವಿದ್ಯಾರ್ಥಿನಿ ಆಯಿಷಾ ಹೇಳಿದರು. ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನ ರಕ್ಷಿಸಿದ ಪಬ್ಲಿಕ್ ಹೀರೋ ವಿಶು ಶೆಟ್ಟಿ
ಆನ್ಲೈನ್ ಕ್ಲಾಸ್ಗಾಗಿ 2 ಕಿ.ಮೀ ದೂರದಲ್ಲಿ ತಾವೇ ಕ್ಲಾಸ್ ರೂಂ ರೆಡಿ ಮಾಡಿದ ವಿದ್ಯಾರ್ಥಿಗಳು..! https://t.co/Qy2b1aNDSa#Udupi #OnlineClass #Students #ClassRoom #KannadaNews @nimmasuresh
— PublicTV (@publictvnews) June 25, 2021
ಕಾಲೇಜಿನಲ್ಲಿ ಉಪನ್ಯಾಸಕರಿಗೆ ಕೂಡಾ ಲಸಿಕೆ ನೀಡಲಾಗಿದೆ. ಉಡುಪಿ ನಗರದ ಆಸುಪಾಸಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ ಎಂದು ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಹೇಳಿದರು. ಇದನ್ನು ಓದಿ: ರಾಜ್ಯದಲ್ಲಿಯ ಲಸಿಕೆ ಕೊರತೆಯನ್ನು ಒಪ್ಪಿಕೊಂಡ ಸಚಿವ ಸುಧಾಕರ್