ಉಡುಪಿ: ಗಣೇಶ ಚತುರ್ಥಿ ಹಬ್ಬದಂದು ಕಡುಬು ತಿಂದು ವಿರಮಿಸದೆ, ಉಡುಪಿ ಡಿಸಿಐಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ಉತ್ತರಪ್ರದೇಶ ರೆಜಿಸ್ಟ್ರೇಷನ್ ಲಾರಿಯಲ್ಲಿ ಕರಾವಳಿಗೆ ಬರುತ್ತಿದ್ದ ಅಪಾರ ಪ್ರಮಾಣದ ಗಾಂಜಾ ವಶಪಡಿಸಿದ್ದಾರೆ. ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ಬಳಿ ಡಿಸಿಐಬಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಉತ್ತರಪ್ರದೇಶ ರಿಜಿಸ್ಟ್ರೇಷನ್ ಲಾರಿ ಬಂದಿದೆ.
Advertisement
Advertisement
ಕಂಟೇನರ್ ಲಾರಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಬಿದಿರಿನ ಕೋಲುಗಳು ಸಿಕ್ಕಿದೆ. ಕಂಟೇನರ್ ನಲ್ಲಿ ಬಿದಿರಾ ಅಂತ ಸಂಶಯಗೊಂಡ ಪೊಲೀಸರು ಚಾಲಕ ಮತ್ತು ನಿರ್ವಾಹಕರ ವಿಚಾರಣೆ ನಡೆಸಿದಾಗ ಇಬ್ಬರು ತಬ್ಬಿಬ್ಬಾಗಿದ್ದಾರೆ. ಬಳಿಕ ಕಂಟೇನರ್ ಅನ್ನು ಪರಿಶೀಲನೆ ನಡೆಸಿದ್ದಾರೆ. ಕೆಲ ಬಿದಿರು ಕೋಲುಗಳನ್ನು ಓಪನ್ ಮಾಡಿ ನೋಡಿದಾಗ ಗಾಂಜಾದ ಪ್ಯಾಕೆಟ್ ಗಳು ಸಿಕ್ಕಿದೆ. ಕಂಟೇನರ್ ನಲ್ಲಿ 49 ಕೆಜಿ ಎಷ್ಟು ಗಾಂಜಾ ಸಿಕ್ಕಿದೆ ಎನ್ನಲಾಗಿದೆ.
Advertisement
Advertisement
ಲಾರಿ ಚಾಲಕ, ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಟೇನರ್ ಸೀಜ್ ಮಾಡಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಗಾಂಜಾ ವಹಿವಾಟು ನಡೆಯುತ್ತದೆ ಎಂಬುದು ಜಗಜ್ಜಾಹೀರು. ಗಾಂಜಾ ವ್ಯಾಪಾರಿಗಳು ಕೂಡ ಈ ಭಾಗದ ಯುವಕರನ್ನು ಗಾಂಜಾ ಗಿರಾಕಿಗಳನ್ನಾಗಿ ಪರಿವರ್ತಿಸಿದ್ದು ಸರ್ಕಾರದ ಮತ್ತು ಪೊಲೀಸರ ನಿದ್ದೆಗೆಡಿಸಿದೆ.