ಗದಗ: ಉಪ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಕೋಮಾ ಸ್ಥಿತಿಗೆ ಬರುತ್ತೆ ಎಂದು ಸಚಿವ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಆಯೋಜಿಸಿದ್ದ ಪಶ್ಚಿಮ ಪದವೀಧರರ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದರು. ಉಪಚುನಾವಣೆಯಲ್ಲಿ ಆರ್.ಆರ್ ನಗರ ಕ್ಷೇತ್ರ ಹಾಗೂ ಶಿರಾ ಕ್ಷೇತ್ರ ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
Advertisement
Advertisement
ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ದೇಶದ ಎಲ್ಲಾ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡಿದೆ. ದೇಶದಲ್ಲಿ ಪ್ರಧಾನ ವಿರೋಧ ಪಕ್ಷವಾಗಿ ಕೂಡಲು ಸಹ ಅರ್ಹತೆ ಇಲ್ಲ. ಇನ್ನು ಜೆಡಿಎಸ್ ಹೆಸರು ಹೇಳದಂತೆ ಹೊರಟಿದೆ. ಜೆಡಿಎಸ್, ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೊಡೆದಾಡುತ್ತಿದ್ದಾರೆ. ಕಾಂಗ್ರೆಸ್ಗೆ ಕರ್ನಾಟಕದಲ್ಲಿ ಸ್ವಲ್ಪ ಉಸಿರು ಇದೆ. ಆ ಉಸಿರು ಗಟ್ಟಿಯಾಗಿ ಇಟ್ಟುಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಉಪ ಚುನಾವಣೆ ಫಲಿತಾಂಶ ಬಂದ ಬಳಿಕ ಕಾಂಗ್ರೆಸ್ ಕೋಮಾಗೆ ತಲುಪುತ್ತದೆ ಎಂದರು.
Advertisement
Advertisement
ಕಾಂಗ್ರೆಸ್, ಜೆಡಿಎಸ್ ಅನೈತಿಕ ಸಂಬಂಧದ ಸರ್ಕಾರ ಅಂತ ಈ ಹಿಂದೆಯೇ ಹೇಳಿದ್ದೆ. ಅನೈತಿಕ ಸಂಬಂಧ ಇವತ್ತು ನಿಜವಾಗಿದೆ. ಕುಮಾರಸ್ವಾಮಿ, ಡಿಕೆಶಿ ಕೈ-ಕೈ ಹಿಡಿದುಕೊಂಡ ಫೋಟೋ ಒಂದು ಸಾರಿ ನೋಡಲಿ ಕಿಡಿಕಾರಿದರು. ಇನ್ನು ಉತ್ತರ ಕರ್ನಾಟಕದಲ್ಲಿ ಉಂಟಾದ ಪ್ರವಾಹದ ಕುರಿತು ಮಾತನಾಡಿ, ಒಂದು ಕಡೆ ಚುನಾವಣೆ ಪ್ರಚಾರ ಇದೆ. ಇನ್ನೊಂದು ಕಡೆ ಯಾರು ಯಾವ ಜವಾಬ್ದಾರಿ ತೆಗೆದುಕೊಂಡು ಹೋಗಬೇಕು ಅದು ಕೂಡಾ ನಡೆಯುತ್ತಿದೆ ಎಂದರು.
ಕಂದಾಯ ಸಚಿವ ಆರ್. ಅಶೋಕ ಎಲ್ಲಾ ಕಡೆ ಪ್ರವಾಸ ಮಾಡಿದ್ದಾರೆ. ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಭೇಟಿ ನೀಡಿ ಜನರ ಕಷ್ಟ ನಷ್ಟಕ್ಕೆ ಸ್ಪಂದನೆ ಮಾಡುತ್ತಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತಕ್ಕೆ ಸಂಪೂರ್ಣ ಜವಾಬ್ದಾರಿ ಕೊಟ್ಟಿದ್ದೇವೆ. ಅಧಿಕಾರಿಗಳು ಎಲ್ಲಾ ರೀತಿಯ ಕಾಳಜಿ ತೆಗೆದುಕೊಳ್ಳುತ್ತಿದ್ದು, ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮ ತೆಗದುಕೊಳ್ಳುತ್ತಿದೆ ಎಂದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಎಸ್.ವಿ ಸಂಕನೂರ, ಶಾಸಕ ಕಳಕಪ್ಪ ಬಂಡಿ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.