ಬೆಂಗಳೂರು: ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನಟ ದುನಿಯಾ ವಿಜಯ್ ಅವರು ಶುಭಕೋರಿದ್ದಾರೆ.
ಇಂದು ಕರ್ನಾಟಕದ ಹಿರಿಯ ರಾಜಕಾರಣಿ ಮತ್ತು ವಿಪಕ್ಷದ ನಾಯಕ ಸಿದ್ದರಾಮಯ್ಯವರು 73ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಹಲವಾರ ರಾಜಕೀಯ ಗಣ್ಯರು ಮತ್ತು ನಟರು ಶುಭಕೋರಿದ್ದಾರೆ. ಅಂತಯೇ ನಟ ದುನಿಯಾ ವಿಜಯ್ ಅವರು ಕೂಡ, ಎಂಟೆದೆಯ ಬಂಟನಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದಾರೆ. ಜೊತೆಗೆ ತಾವು ಕೈ ಮುಗಿಯುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
Advertisement
ಎಂಟೆದೆಯ ಬಂಟನಿಗೆ
ಹುಟ್ಟುಹಬ್ಬದ ಶುಭಾಶಯಗಳು????@siddaramaiah #salaga pic.twitter.com/3RgNRc6O6y
— Duniya Vijay (@OfficialViji) August 12, 2020
Advertisement
ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮಾಡುವ ಮೂಲಕ ವಿಶ್ ಮಾಡಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಎಂದಿದ್ದಾರೆ. ನೆಚ್ಚಿನ ನಾಯಕ ಹುಟ್ಟುಹಬ್ಬಕ್ಕೆ ಅವರ ಅಪಾರವಾದ ಅಭಿಮಾನಿಗಳು ಕೂಡ ವಿಶ್ ಮಾಡಿದ್ದಾರೆ.
Advertisement
ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ @siddaramaiah ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
— H D Devegowda (@H_D_Devegowda) August 12, 2020
Advertisement
ಹಿರಿಯ ರಾಜಕಾರಣಿಗಳು, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಆತ್ಮೀಯರೂ ಆಗಿರುವ ಶ್ರೀ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೂಡ ಹಾರೈಸಿದ್ದಾರೆ. ಜೊತೆಗೆ ಕಂದಾಯ ಮಂತ್ರಿ ಆರ್ ಅಶೋಕ್ ಕೂಡ ಸಿದ್ದರಾಮಯ್ಯ ಅವರಿಗೆ ವಿಶ್ ಮಾಡಿದ್ದು, ಮಾಜಿ ಮುಖ್ಯಮಂತ್ರಿಗಳು, ಹಿರಿಯ ರಾಜಕಾರಣಿ, ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ತಮಗೆ ದೇವರು ಇನ್ನೂ ಉತ್ತಮ ಆರೋಗ್ಯ ನೀಡಿ ಜನ ಸೇವೆ ಮಾಡುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕೇಳಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು, ಹಿರಿಯ ರಾಜಕಾರಣಿ, ವಿಪಕ್ಷ ನಾಯಕರಾದ@siddaramaihರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ತಮಗೆ ದೇವರು ಇನ್ನೂ ಉತ್ತಮ ಆರೋಗ್ಯ ನೀಡಿ ಜನ ಸೇವೆ ಮಾಡುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. pic.twitter.com/XoGKVFCMAD
— R. Ashoka (ಆರ್. ಅಶೋಕ) (@RAshokaBJP) August 12, 2020
ಸದ್ಯ ಕೊರೊನಾ ಸೋಂಕಿಗೆ ತುತ್ತಾಗಿರುವ ಸಿದ್ದರಾಮಯ್ಯ ಅವರು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಸೋಂಕಿನಿಂದ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದು, ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ. ಸಿದ್ದರಾಮಯ್ಯ ಅವರು ಕೋವಿಡ್ 19 ನಿಂದ ಈಗ ಪೂರ್ಣ ಗುಣಮುಖರಾಗಿದ್ದಾರೆ. ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾದ ಮೊದಲ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ. ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.