ಮುಂಬೈ: ಕೋವಿಡ್-19 ನಿರ್ಬಂಧಗಳ ನಡುವೆಯೂ ಎಮ್ಮೆಯ ಹುಟ್ಟುಹಬ್ಬವನ್ನು ಆಚರಿಸಿದ್ದ ವ್ಯಕ್ತಿ ವಿರುದ್ಧ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಿರಣ್ ಮಾತ್ರೆ(30) ಎಂಬ ವ್ಯಕ್ತಿ ಗುರುವಾರ ತಮ್ಮ ಥಾಣೆಯಲ್ಲಿರುವ ಮನೆಯಲ್ಲಿ ಎಮ್ಮೆಯ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣ ಹೆಚ್ಚಾಗುತ್ತಿದ್ದರೂ, ಬರ್ತ್ಡೇಗೆಂದು ಹಾಜರಾಗಿದ್ದವರು ಮಾಸ್ಕ್ ಧರಿಸಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೀಗ ಪೊಲೀಸರು ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 269 (ಜೀವಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ನಿರ್ಲಕ್ಷ್ಯದ ಕೃತ್ಯ)ದ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.