ದಾವಣಗೆರೆ: ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್ 7, 8 ಇಲ್ಲವೇ 9 ರಂದು ರಾಜ್ಯದಲ್ಲಿ ಕಿಸಾನ್ ಯಾತ್ರೆ ಆರಂಭಿಸಲಿದ್ದೇವೆ. ಎರಡು ದಿನಗಳ ಕಾಲ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದು ರಾಜ್ಯ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಸಚಿನ್ ಮೀಗಾ ಹೇಳಿದರು.
Advertisement
ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದಲ್ಲಿ ಕಿಸಾನ್ ಯಾತ್ರೆ ಆರಂಭಿಸಲಿದ್ದೇವೆ. ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಈಗಾಗಲೇ ದೇಶಾದ್ಯಂತ ಪ್ರತಿಭಟನೆಗಳು ಶುರುವಾಗಿದೆ. ಬೆಳಗಾವಿ ಹಾಗೂ ಬೀದರ್ ವಿಭಾಗದಲ್ಲಿ ಕಿಸಾನ್ ಯಾತ್ರೆ ನಡೆಯಲಿದೆ. ಪಕ್ಷದ ಮುಖಂಡರು ಸೇರಿ ಸರಿಯಾದ ದಿನಾಂಕ ಹಾಗೂ ಯಾತ್ರೆಯ ಮಾರ್ಗ ನಿಗದಿ ಮಾಡಲಿದ್ದಾರೆ ಎಂದರು.
Advertisement
Advertisement
ಕೇಂದ್ರ ಸರ್ಕಾರದ ವಿರುದ್ಧ ದೇಶದಲ್ಲಿ ವಿರೋಧಿ ಅಲೆ ಎದ್ದಿದ್ದು. ಬೆದರಿಕೆ ಪತ್ರ ಮೂಲಕ ಸುಗ್ರೀವಾಜ್ಞೆ ಹೊರಡಿಸಿರುವ ಬಿಜೆಪಿ ಸರ್ಕಾರ ಜನ ವಿರೋಧಿ, ರೈತ ವಿರೋಧಿ ಮಸೂದೆ ಜಾರಿಗೆ ತಂದಿದೆ. ಬಿಜೆಪಿ ಸರ್ಕಾರ ರೈತ ವಿರೋಧಿ ನೀತಿ ಜಾರಿಗೆ ತರಲು ಮುಂದಾಗಿರುವುದು ಖಂಡನೀಯ. ಎಲ್ಲಾ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗಳು ಸಭೆಗಳು ನಡೆಯುತ್ತಿದ್ದು, ಈಗ ಕಿಸಾನ್ ಕಾಂಗ್ರೆಸ್ ನಿಂದ ರಾಷ್ಟ್ರಪತಿಗಳಿಗೆ ಪತ್ರ ಬರೆಯುವುದರ ಮೂಲಕ ಕಾಯ್ದೆಯನ್ನು ಹಿಂಪಡೆಯುವಂತೆ ಪತ್ರ ಚಳುವಳಿ ನಡೆಸಲಾಗುವುದು.
Advertisement
ಅಂತಾರಾಷ್ಟ್ರೀಯ ಮಾರುಕಟ್ಟೆ ಹೆಸರಲ್ಲಿ ರೈತರ ಶೋಷಣೆ ನಡೆಯುತ್ತದೆ. ರೈತರು ಉದ್ಯಮಿಗಳ ಗುಲಾಮರಾಗ ಬೇಕಾಗುತ್ತದೆ. ಮೋದಿಯವರು ಅಂಬಾನಿ ಕುಟುಂಬಕ್ಕೆ ಅನುಕೂಲ ಮಾಡಿಕೊಡಲು ಮುಂದಾಗಿದ್ದಾರೆ. ಉದಾಹರಣೆ ಜಿಯೋಗೆ ಅವಕಾಶ ಮಾಡಿಕೊಟ್ಟು ಬಿಎಸ್ಎನ್ಎಲ್ ಸಂಸ್ಥೆಯನ್ನೇ ಮುಚ್ಚಿ ಹಾಕುತ್ತಿದ್ದಾರೆ. ಹೀಗೆ ಕೇಂದ್ರ ಸರ್ಕಾರ ತಮ್ಮ ಆಪ್ತರಿಗೆ ಅನುಕೂಲ ಮಾಡಿಕೊಟ್ಟಂತೆ ಎಪಿಎಂಸಿಯನ್ನು ಅದೇ ರೀತಿ ಮಾಡಲು ಮುಂದಾಗಿದೆ. ಮುಂದಿನ ತಿಂಗಳು ರಾಜ್ಯದಲ್ಲಿ ಕಿಸಾನ್ ಯಾತ್ರೆ ಆರಂಭಿಸುವ ಮೂಲಕ ಹೋರಾಟ ಮಾಡುತ್ತೇವೆ ಎಂದರು.