– ವಿಧಾನಸೌಧದಲ್ಲಿ ಮತ್ತೊಮ್ಮೆ ಧ್ವಜ ಹಾರಿಸುತ್ತೇವೆ
– ಪ್ರೀತಂಗೌಡ ವಿರುದ್ಧ ಪ್ರಜ್ವಲ್ ಕಿಡಿ
ಹಾಸನ: ಚುನಾವಣೆ ಅಂದ್ರೆ ಏನು ಅಂತ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ತೋರಿಸುತ್ತೇವೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.
Advertisement
ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ರಸ್ತೆ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ತಂದಿರುವ ಅನುದಾನಕ್ಕೆ ಶಾಸಕ ಪ್ರೀತಂಗೌಡ ಗುದ್ದಲಿ ಪೂಜೆ ಮಾಡುತ್ತಿದ್ದಾರೆ. ಎಂಪಿ ಅನುದಾನದಲ್ಲಿ ಎಂಪಿಯವರ ಸಹಿ ಇಲ್ಲದೆ ರಸ್ತೆ ಮಂಜೂರಾತಿ ಆಗಲ್ಲ ಎಂಬುದು ಅವರಿಗೆ ಗೊತ್ತಿಲ್ಲ. ಅವರು ತಂದ ಅನುದಾನವನ್ನು ನಾವೇನು ಹೋಗಿ ಪೂಜೆ ಮಾಡಲ್ಲ. ನಾವು ತಂದಿರುವ ಅನುದಾನದಲ್ಲಿ ಈಗಾಗಲೇ ಒಂದು ಬದಿಯಿಂದ ಅರ್ಧ ಕೆಲಸ ಆಗಿದೆ. ಅಂತಹ ಕಾಮಗಾರಿಗೆ ಮತ್ತೊಂದು ಬದಿಯಿಂದ ಪ್ರೀತಂಗೌಡ ಪೂಜೆ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿ ಹಾಸನ ತಾಲೂಕಿಗೆ ಬಂದಿರೋದು ನಮ್ಮ ದುರಾದೃಷ್ಟ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಅಧಿಕಾರಿಗಳು ನನ್ನ ಜೊತೆ ಇದ್ದಾರೆ ಅಂತಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ಬೇರೆಯವರ ಮೇಲೆ ಕೇಸ್ ಹಾಕಿಸಿ, ಕಾರ್ಯಕರ್ತರ ನಡುವೆ ಹೊಡೆದಾಡಿಸುವ ಕೆಲಸ ಮಾಡುತ್ತಿದ್ದಾರೆ. ಅದು ಅವರನ್ನ ಸದಾಕಾಲ ಕಾಪಾಡಲ್ಲ. ಅವರು ನನಗೆ ಬುದ್ಧಿವಾದ ಹೇಳುವುದು ಬೇಡ. ನನಗೆ ಬುದ್ಧಿವಾದ ಹೇಳಲು 50 ವರ್ಷ ರಾಜಕಾರಣ ಮಾಡಿದ ದೇವೇಗೌಡರು, ರೇವಣ್ಣ ಇದ್ದಾರೆ ಎಂದು ಕಿಡಿಕಾರಿದರು.
Advertisement
ಪ್ರೀತಂ ಅವರು ಯಾವಾಗಲೂ ದೇವೇಗೌಡರ ಹೆಸರೇಳಿಕೊಂಡು ಎಂಪಿ ಆದ ಎಂದು ಹೇಳುತ್ತಿರುತ್ತಾರೆ. ಹೌದು ನಾನು ದೇವೇಗೌಡರ ಹೆಸರೇಳಿಕೊಂಡೇ ಎಂಪಿ ಆಗಿರೋದು. ಇದನ್ನು ಗಟ್ಟಿ ಧ್ವನಿಯಲ್ಲಿ ಹೇಳುತ್ತೇನೆ. ಅವರ ಹೆಸರು, ಸಿದ್ಧಾಂತವನ್ನು ಇಟ್ಟುಕೊಂಡೇ ನಾವೆಲ್ಲ ರಾಜಕಾರಣ ಮಾಡುತ್ತಿದ್ದೇವೆ. ಯಡಿಯೂರಪ್ಪ ಅವರ ಮಗ ನನ್ನ ಜೊತೆ ಚೆನ್ನಾಗಿದ್ದಾರೆ ಎಂದು ಕೊಚ್ಚಿಕೊಳ್ಳುತ್ತಾರೆ. ಅವರು ಎಷ್ಟು ಅನುದಾನ ತಂದಿದ್ದಾರೆ. ಅವರ ಸರ್ಕಾರ ಲೂಟಿ ಹೊಡೆಯುತ್ತಿದೆ. ನಾವು ಸುಮ್ಮನೆ ಕುಳಿತಿದ್ದೇವೆ ಎಂದರೆ ನಮಗೆ ಮತನಾಡಲು ಬರಲ್ಲ ಅಂತಲ್ಲ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಹಾಸನ ತಾಲೂಕಿನಲ್ಲಿ ಹೊಸದಾಗಿ ಎಂಎಲ್ಎ ಆಗಿದ್ದಾರೆ. ಅವರಿಗೆ ಸ್ವಲ್ಪ ತಿಳುವಳಿಕೆ ಕಡಿಮೆ ಇದೆ. ಚುನಾವಣೆ ಅಂದ್ರೆ ಏನು ಎಂದು ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ತೋರಿಸುತ್ತೇವೆ ಎಂದರು.
ಶಿರಾ ಚುನಾವಣೆ ಸಂಬಂಧ ಮಂತ್ರಕ್ಕೆ ಮಾವಿನಕಾಯಿ ಉದುರಲ್ಲ ಎಂಬ ಪ್ರೀತಂಗೌಡ ಹೇಳಿಕೆಗೆ ತಿರುಗೇಟು ನೀಡಿದ ಪ್ರಜ್ವಲ್ ರೇವಣ್ಣ, ನಾವು ಶಿರಾಗೆ ಮಾವಿನಕಾಯಿ ಉದುರಿಸಲು ಹೋಗಿದ್ದೆ ಅಂತಾ ಹೇಳಿದ್ನಾ. ಶಿರಾದಲ್ಲಿ ದುಡ್ಡು ಹಂಚಿಕೆ ಮಾಡಿ ಮತ ಹಾಕಿಸಿಕೊಂಡಿದ್ದಾರೆ. ಯಡಿಯೂರಪ್ಪ ಕೆಜೆಪಿ ಮಾಡಿ 10 ಸೀಟು ತಗೊಂಡ್ರು. ಹಾಗಾದ್ರೆ ಯಡಿಯೂರಪ್ಪ ಸೋತಿಲ್ವಾ. ನಾವು ಮತ್ತೊಮ್ಮೆ ವಿಧಾನಸೌಧದಲ್ಲಿ ಧ್ವಜ ಹಾರಿಸುವ ಕೆಲಸ ಮಾಡುತ್ತೇವೆ.