ಮೈಸೂರು: ಸರ್ಕಾರಕ್ಕೆ ನಾವು ಒತ್ತಾಯ ಮಾಡಬಾರದು. ಅವರು ಸಹ ಕಷ್ಟದಲ್ಲಿದ್ದಾರೆ. ಸರ್ಕಾರ ಎಲ್ಲವನ್ನು ನಿಭಾಯಿಸಬೇಕು. ಹಾಗಾಗಿ ಅವರಿಗೂ ಸಮಯ ಬೇಕಾಗುತ್ತೆ ಎಂದು ಸ್ಯಾಂಡಲ್ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ.
Advertisement
ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿದ ಬಳಿಕ ಸರ್ಕಾರದ ಹೊಸ ಮಾರ್ಗಸೂಚಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಥಿಯೇಟರ್ ಓಪನ್ ಆಗಿರೋದು ತುಂಬಾ ಖುಷಿ ವಿಚಾರ. ಆದರೆ ಎಷ್ಟು ಜನ ಬರಬೇಕು ಅಂತ ನಟನಾಗಿ ನಾನು ಏನು ಹೇಳೋಕೆ ಆಗಲ್ಲ ಎಂದರು.
Advertisement
Advertisement
ಲಾಕ್ಡೌನ್ನಿಂದ ಚಿತ್ರರಂಗಕ್ಕೆ ಸಂಕಷ್ಟವಾಗಿರುವ ಸಂಬಂಧ ಸಿಎಂ ಯಡಿಯೂರಪ್ಪ ನೆರವಾಗುವ ಭರವಸೆ ನೀಡಿದ್ದಾರೆ. ಅವರ ಭರವಸೆಯ ನಿರೀಕ್ಷೆಯಲ್ಲೇ ಇದ್ದೇವೆ. ನಮಗೆ ಅವರಿಂದ ಉತ್ತಮ ಸ್ಪಂದನೆ ಸಿಗುವ ಸಾಧ್ಯತೆ ಇದೆ. ಸರ್ಕಾರಕ್ಕೆ ನಾವು ಒತ್ತಾಯ ಮಾಡಬಾರದು. ಅವರು ಸಹ ಕಷ್ಟದಲ್ಲಿದ್ದಾರೆ. ಸರ್ಕಾರ ಎಲ್ಲವನ್ನು ನಿಭಾಯಿಸಬೇಕು. ಹಾಗಾಗಿ ಅವರಿಗೂ ಸಮಯ ಬೇಕಾಗುತ್ತೆ. ಸಿಎಂ ಮಾತಿನ ಮೇಲೆ ಭರವಸೆ ಇದೆ. ಚಿತ್ರರಂಗಕ್ಕೆ ಸರ್ಕಾರ ನೆರವಾಗುವ ನಿರೀಕ್ಷೆ ಇದೆ ಅಂದ್ರು. ಇದನ್ನೂ ಓದಿ: ಮೈಸೂರು ಮೃಗಾಲಯಕ್ಕೆ ಹ್ಯಾಟ್ರಿಕ್ ಹೀರೋ ಭೇಟಿ
Advertisement
ನಟನಾಗಿ ನಾನು ಶೂಟಿಂಗ್ ಮಾಡಬಹುದು ಆ್ಯಕ್ಟಿಂಗ್ ಮಾಡಬಹುದು. ಚಿತ್ರ ಪ್ರದರ್ಶನ ಹಾಗೂ ಬಿಡುಗಡೆ ಬಗ್ಗೆ ನಾನೇನು ಹೇಳೋಲ್ಲ. ಅದಕ್ಕೆ ಅಂತ ನಿರ್ಮಾಪಕರಿದ್ದಾರೆ. ಅವರೇ ತೀರ್ಮಾನ ಮಾಡುತ್ತಾರೆ. ನಾನು ಪ್ರೇಕ್ಷಕರಿಗೆ ಸಿನಿಮಾ ನೋಡಲು ಬನ್ನಿ ಅಂತ ಕರೆಯುತ್ತೇನೆ. ಆದರೆ ಯಾರಿಗೂ ಒತ್ತಾಯ ಮಾಡಿ ರಿಸ್ಕ್ ತೆಗೆದುಕೊಂಡು ಸಿನಿಮಾ ನೋಡಿ ಅಂತ ಹೇಳಲ್ಲ ಎಂದು ಹೇಳಿದರು.
ಸಿನಿಮಾ ಸಹ ಒಂದು ಉದ್ಯಮ. ಎಲ್ಲ ಉದ್ಯಮದಂತೆ ಇದು ಸಹ ನಿಧಾನವಾಗಿ ಮೇಲೇಳಬೇಕು. ಯಾವ ಸಿನಿಮಾ ಬರಬೇಕು ಅಂತಾನು ನಾನು ಹೇಳೋಲ್ಲ. ಎಲ್ಲ ಸಿನಿಮಾಗಳು ಒಂದೇ. ಅದೊಂದು ಮ್ಯಾಜಿಕ್ ರೀತಿ ಇರುತ್ತೆ ಯಾವ ಸಿನಿಮಾ ಬೇಕಾದ್ರು ಗೆಲ್ಲಬಹುದು. ಆದರೆ ಜನರು ತಮ್ಮ ಸುರಕ್ಷತೆ ನೋಡಿಕೊಂಡು ಥಿಯೇಟರ್ ಗೆ ಬರಲಿ. ಥಿಯೇಟರ್ ನಲ್ಲಿ ಏನೇ ಸಮಸ್ಯೆ ಇದ್ದರೂ ನೇರವಾಗಿ ಹೇಳಲಿ. ಪ್ರೇಕ್ಷಕರ ಸುರಕ್ಷತೆ ನಮಗೆ ಬಹಳ ಮುಖ್ಯ ಎಂದು ತಿಳಿಸಿದರು.