ಬೀದರ್: ಜಿಲ್ಲಾ ಪಂಚಾಯತ್ ಬಸವಕಲ್ಯಾಣ ವಿಭಾಗದಲ್ಲಿ ಗ್ರಾಮೀಣ ಕುಡಿಯುವ ನೀರು ಯೋಜನೆಯ ಕಿರಿಯ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ಮೋರೆ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯಲ್ಲಿ ನಗದು, ಚಿನ್ನಾಭರಣ ಮತ್ತು ಆಸ್ತಿ ಪತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
Advertisement
ಬಸವಕಲ್ಯಾಣದ ಶಿವಾಜಿ ನಗರದ ಸುರೇಶ್ ಮೋರೆ ನಿವಾಸದಲ್ಲಿ 15 ಲಕ್ಷ ನಗದು, 750 ಗ್ರಾಂ ಚಿನ್ನ, 3 ನಿವೇಶನಗಳ ಆಸ್ತಿ ಪತ್ರ ಪತ್ತೆಯಾಗಿದೆ. ಜೊತೆಗೆ 10 ಲಕ್ಷ ಎಫ್ಡಿ ಹಾಗೂ 20 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರೋದು ದಾಳಿಯಲ್ಲಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದರ್ಶನ್ ನನ್ನ ಮೇಲೆ ಹಲ್ಲೆ ನಡೆಸಿಲ್ಲ, ಕೋಮಾದಲ್ಲಿಯೂ ಇಲ್ಲ: ಗೋಪಾಲ್ ರಾಜ್
Advertisement
Advertisement
ಬೀದರ್ ಜಿಲ್ಲೆಯಲ್ಲಿ ಇಂದು ಮೂರು ಕಡೆ ಏಕ ಕಾಲದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಎಸ್ಪಿ ಮಹೇಶ್ ಮೇಘಣ್ಣನವರ್ ಮಾರ್ಗದರ್ಶನದಲ್ಲಿ ದಾಳಿ ನಡೆದಿತ್ತು. ಇನ್ನಿಬ್ಬರು ಅಧಿಕಾರಿಗಳ ಆಸ್ತಿ ವಿವರದ ಮಾಹಿತಿ ತಿಳಿದು ಬಂದಿಲ್ಲ. ಇದನ್ನೂ ಓದಿ: ದರ್ಶನ್ ಒಮ್ಮೆ ಕೆಟ್ಟದಾಗಿ ಬೈದ್ರು ಅದಕ್ಕೆ ಕೆಲಸ ಬಿಟ್ಟೆ: ಹಾರ್ಸ್ ರೈಡರ್ ಸಂತೋಷ್