ಬೆಂಗಳೂರು: ಸ್ವಿಡನ್ ಚಳವಳಿಗಾರ್ತಿ ಗ್ರೇಟಾ ಥನಾಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಿಶಾ ರವಿಯನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇದೀಗ ನ್ಯಾಯಾಲಯ ಬಂಧಿತ ಆರೋಪಿಯನ್ನ ಐದು ದಿನ ಪೊಲೀಸರ ವಶಕ್ಕೆ ನೀಡಿದೆ.
Advertisement
21 ವರ್ಷದ ದಿಶಾ ರವಿ ಓರ್ವ ಪರಿಸರ ಹೋರಾಟಗಾರ್ತಿ. ಫ್ರೈಡೆ ಫಾರ್ ಫ್ಯೂಚರ್ ಎಂಬ ಕಂಪನಿಯ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ. ನಗರ ಪ್ರಸಿದ್ಧ ಕಾಲೇಜಿನಲ್ಲಿ ಎಂಬಿಎ ಪದವಿ ಓದಿರುವ ದಿಶಾ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ತಂದೆ ಮೈಸೂರಿನಲ್ಲಿ ಅಥ್ಲೆಟಿಕ್ಸ್ ಕೋಚ್ ಆಗಿದ್ದು ತಾಯಿ ಗೃಹಿಣಿಯಾಗಿದ್ದಾರೆ. ಈ ಟ್ವೀಟ್ ಮಾಡಿ ಬೆಂಬಲ ನೀಡಲು ಟೂಲ್ ಕಿಟ್ ಮುಖಾಂತರ ಹಣ ಪಡೆದ ಆರೋಪ ದಿಶಾ ರವಿ ಮೇಲಿದೆ.
Advertisement
Advertisement
ದೇಶದಲ್ಲಿ ನಡೆಯುತ್ತಿರುವ ಕೃಷಿ ಆಂದೋಲನವನ್ನು ಬೆಂಬಲಿಸಿ ಗ್ರೇಟಾ ಥನಾಬರ್ಗ್ ಇತೀಚೆಗೆ ಟ್ವೀಟ್ ಮಾಡಿದ್ದರು. ಇದರ ಜೊತೆ ಇನ್ನೊಂದು ಟ್ವೀಟ್ ಮಾಡಿ ಒಂದು ಡಾಕ್ಯುಮೆಂಟ್ ರಿಲೀಸ್ ಮಾಡಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿರುದ್ಧ ಹೇಗೆ ಚಳವಳಿ ನಡೆಸಬೇಕು ಎಂಬ ಕಾರ್ಯಯೋಜನೆ ಟೂಲ್ ಕಿಟ್ ನಲ್ಲಿತ್ತು. ಆ ಟ್ವೀಟ್ ಭಾರತದಲ್ಲಿನ ಕೃಷಿ ಚಳವಳಿಯಲ್ಲಿ ವಿದೇಶಿ ಶಕ್ತಿಗಳ ಕೈವಾಡವನ್ನು ಬಯಲಿಗೆಳೆದಿದೆ ಎಂದು ಬಿಜೆಪಿ ಆಪಾದಿಸಿತ್ತು. ಈ ಆರೋಪಗಳ ಬೆನ್ನಲ್ಲೇ ಗ್ರೇಟಾ ಥನಾಬರ್ಗ್ ಟೂಲ್ ಕಿಟ್ ತನ್ನ ಟ್ವೀಟ್ ಡಿಲೀಟ್ ಮಾಡಿದ್ದರು. ನಂತರ ಹೊಸ ಟ್ವೀಟ್ ಮಾಡಿ ಹೊಸ ಟೂಲ್ ಕಿಟ್ ಬಿಡುಗಡೆ ಮಾಡಿದ್ದರು.