ನವದೆಹಲಿ: ದೇಶದಲ್ಲಿ ಚೀನಿ ವೈರಸ್ ಕೋವಿಡ್ 19 ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ.
India's #COVID19 case tally crosses 55-lakh mark with a spike of 75,083 new cases & 1,053 deaths in last 24 hours.
The total case tally stands at 55, 62,664 including 9,75,861 active cases, 44,97,868 cured/discharged/migrated & 88,935 deaths: Ministry of Health & Family Welfare pic.twitter.com/17zx2Hj4VO
— ANI (@ANI) September 22, 2020
Advertisement
ಕಳೆದ 24 ಗಂಟೆಯಲ್ಲಿ 75,083 ಮಂದಿಯಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೊಂಕಿತರ ಸಂಖ್ಯೆ 55,62,664ಕ್ಕೆ ಏರಿಕೆಯಾಗಿದೆ. ಒಂದೇ ದಿನ 1,053 ಮಂದಿ ಕೊರೊನಾ ವೈರಸ್ ಗೆ ತುತ್ತಾಗಿದ್ದು, ಇದೂವರೆಗೂ 88,935 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
Advertisement
Advertisement
55, 62,664 ಸೋಂಕಿತರ ಪೈಕಿ 9,75,861 ಸಕ್ರಿಯ ಪ್ರಕರಣಗಳಿದ್ದು, 44,97,868 ಮಂದಿ ಈಗಾಗಲೇ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Advertisement
COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 pic.twitter.com/41sIeZXhex
— ICMR (@ICMRDELHI) September 22, 2020
ದೇಶದಲ್ಲಿ ನಿನ್ನೆ ಒಂದೇ ದಿನ 9,33,185 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 6,53,25,779 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.