ಹೈದರಾಬಾದ್: ಅಸಾದುದ್ದಿನ್ ಓವೈಸಿ ಮೊಹಮ್ಮದ್ ಅಲಿ ಜಿನ್ನಾನ ಅವತಾರವಾಗಿದ್ದು, ಅವರ ಪಕ್ಷಕ್ಕೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಗುಡುಗಿದ್ದಾರೆ.
ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಗುಡುಗಿದ್ದ ತೇಜಸ್ವಿ ಸೂರ್ಯ, ಇದೀಗ ಹೈದಾರಾಬಾದ್ನಲ್ಲಿ ಅಸಾದುದ್ದಿನ್ ಓವೈಸಿ ವಿರುದ್ಧ ಹರಿಹಾಯ್ದಿದ್ದಾರೆ. ಮುಂದಿನ ತಿಂಗಳು ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಇರುವ ಹಿನ್ನೆಲೆ ಬಿಜೆಪಿ ಪರ ತೇಜಸ್ವಿ ಸೂರ್ಯ ಪ್ರಚಾರ ನಡೆಸುತ್ತಿದ್ದಾರೆ.
Advertisement
विकास के लिए
ChangeHyderabad
Corruption-free Govt के लिए
ChangeHyderabad
Family Politics बंद करने के लिए
ChangeHyderabad
21वीं सदी के Infrastructure के लिए
ChangeHyderabad
AIMIM का Terrorism बंद करने के लिए
Change Hyderabad
तेलंगाना को ऊँचाइयों पर ले जाने के लिए#ChangeHyderabad pic.twitter.com/t5MBwDQDIR
— Tejasvi Surya (@Tejasvi_Surya) November 23, 2020
Advertisement
ಸದಾ ವಿಭಜನೆಯ ಹಾಗೂ ವಿವಾದಾತ್ಮಕ ಹೇಳಿಕೆ ನೀಡುವ ಅಸಾದುದ್ದಿನ್ ಓವೈಸಿ ವಿರುದ್ಧ ಗುಡುಗಿರುವ ತೇಜಸ್ವಿ ಸೂರ್ಯ, ಅವರಿಗೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧವಾಗಿದೆ ಎಂದಿದ್ದಾರೆ. ಅಸಾದುದ್ದಿನ್ ಓವೈಸಿ ಹಾಗೂ ಸಹೋದರ ಅಕ್ಬರುದ್ದಿನ್ ಓವೈಸಿ ವಿಭಜನೆ ಹಾಗೂ ಕೋಮುವಾದಿ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಬೇಕಾಗಿಲ್ಲ. ಬದಲಿಗೆ ರೊಹಿಂಗ್ಯಾ ಮುಸ್ಲಿಮರಿಗೆ ಮಾತ್ರ ಆಶ್ರಯ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
Advertisement
If anti-national forces are made stronger in one part of the country, they gradually spread their footprints to the other parts.
It’s important that we contain these forces at the lowest level. There’s nothing more important than our country.#ChangeHyderabad pic.twitter.com/4UIKdsAOTF
— Tejasvi Surya (@Tejasvi_Surya) November 23, 2020
Advertisement
ನೀವು ಇಲ್ಲಿ ಓವೈಸಿಗೆ ಮತ ಹಾಕಿದರೆ ಮುಂದೆ ಅವರು ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಮುಸ್ಲಿಂ ಪ್ರದೇಶಗಳಲ್ಲಿ ಬಲಶಾಲಿಯಾಗುತ್ತಾರೆ. ಓವೈಸಿ ಜಿನ್ನಾನ ಹೊಸ ಅವತಾರ. ಹೀಗಾಗಿ ಅವರನ್ನು ಸೋಲಿಸಲೇಬೇಕು. ನೀವು ಬಿಜೆಪಿಗೆ ಹಾಕುವ ಪ್ರತಿ ಮತ ಭಾರತ, ಹಿಂದುತ್ವಕ್ಕೆ, ಇದರಿಂದ ದೇಶ ಬಲಗೊಳ್ಳಲಿದೆ ಎಂದು ಕರೆ ನೀಡಿದರು.
ಇದು ನಿಜಾಮರ ಕಾಲಾವಧಿಯಲ್ಲ ಎಂಬುದನ್ನು ನಾನು ಅಸಾದುದ್ದಿನ್ ಹಾಗೂ ಅಕ್ಬರುದ್ದಿನ್ ಅವರಿಗೆ ತಿಳಿಸಲು ಬಯಸುತ್ತೇನೆ. ಇದು ಹಿಂದೂ ಹೃದಯ ಸಾಮ್ರಾಟರಾದ ಪ್ರಧಾನಿ ನರೇಂದ್ರ ಮೋದಿಯವರ ಕಾಲಾವಧಿ. ನೀವಿಲ್ಲಿ ಏನೂ ಅಲ್ಲ ಎಂದು ಕಿಡಿಕಾರಿದರು.
Youth of Hyderabad turned up in large numbers for rallies in Qutbullapur, Jubilee Hills & Madhpur-Lingampally
Most of BJP candidates for upcoming GHMC polls are youngsters. This has galvanized the support of youngsters to BJP. They’ll vote for a new Hyderabad#ChangeHyderabad pic.twitter.com/AQN9PqkNxP
— Tejasvi Surya (@Tejasvi_Surya) November 23, 2020
ಪ್ರಚಾರದುದ್ದಕ್ಕೂ ಹೈದರಾಬಾದ್ಗೆ ಭಾಗ್ಯ ನಗರವೆಂದೇ ಸಂಬೋಧಿಸಿದ ತೇಜಸ್ವಿ, ಹೈದರಾಬಾದ್ನ್ನು ಭಾಗ್ಯಾನಗರವಾಗಿ ಬದಲಿಸಬೇಕಿದೆ ಎಂದರು. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾಪೋರೇಷನ್ ಚುನಾವಣೆ ಡಿಸೆಂಬರ್ 1ರಂದು ನಡೆಯುತ್ತಿದ್ದು, ಇದು ದಕ್ಷಿಣ ಭಾರತದ ಗೇಟ್ವೇಯಾಗಿದೆ. ಹೀಗಾಗಿ ಇಂದು ಹೈದರಾಬಾದನ್ನು ಬದಲಿಸೋಣ, ನಾಳೆ ತೆಲಂಗಾಣ, ನಾಡಿದ್ದು ದಕ್ಷಿಣ ಭಾರತವನ್ನು ಬದಲಿಸೋಣ. ಹೈದರಾಬಾದ್ ಚುನಾವಣೆಯನ್ನು ಇಡೀ ದೇಶವೇ ಬೆರಗುಗಣ್ಣಿನಿಂದ ನೋಡುತ್ತಿದೆ ಎಂದರು.