ನವದೆಹಲಿ: ಯುಗಾದಿ ಹಬ್ಬದ ಸಂಭ್ರಮಕ್ಕೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಭಾಶಯವನ್ನು ತಿಳಿಸಿದ್ದಾರೆ.
Advertisement
ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ ಎಂದು ಮೋದಿ ಟ್ವೀಟ್ ಮಾಡುವ ಮೂಲಕವಾಗಿ ಶುಭಾಶಯ ತಿಳಿಸಿದ್ದಾರೆ.
Advertisement
ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ.
— Narendra Modi (@narendramodi) April 13, 2021
Advertisement
ಕನ್ನಡಮಾತ್ರವಲ್ಲದೆ ಬೇರೆ ಬೇರೆ ಭಾಷೆಯಲ್ಲಿ ಟ್ವೀಟ್ ಮಾಡುವ ಮೂಲಕವಾಗಿ ದೇಶದ ಜನರಿಗೆ ಯುಗಾದಿ ಹಬ್ಬದ ಶುಭಾಶಯವನ್ನು ಮೋದಿ ತಿಳಿಸಿದ್ದಾರೆ.
Advertisement
ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭಾಶಯವನ್ನು ಬಿಎಸ್ವೈ ಕೊರಿದ್ದಾರೆ. ಯುಗಾದಿ ಹಬ್ಬದಂದು ಎಲ್ಲರಿಗೂ ಸುಖ- ಶಾಂತಿ ನೆಮ್ಮದಿ ಸಿಗಲಿ. ಕೊವೀಡ್ ನಿಯಂತ್ರಣಕ್ಕೆ 18 ರಂದು ಸರ್ವ ಪಕ್ಷಗಳ ಸಭೆ ಕರೆದಿದ್ದೇನೆ. 18 ರಂದು ಎಲ್ಲಾ ಪಕ್ಷದ ನಾಯಕರ ಜೊತೆ ಚೆರ್ಚ ಮಾಡಿ ನಿರ್ಧಾರ ಮಾಡುತ್ತೆವೆ. ಸಾರ್ವಜನಿಕರು ಮಾಸ್ಕ್, ಸಾಮಾಜಿಕ ಅಂತರ ಕಾಪಾಡಬೇಕು. ಸಲಹಾ ಸಮಿತಿ ಮೇ 2 ರಂದು ಕೊವೀಡ್ ಸಂಖ್ಯೆ ಜಾಸ್ತಿಯಾಗುತ್ತೆ ಎಂದು ಹೇಳಿದೆ ಎಂದಿದ್ದಾರೆ.
ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆ ಇಲ್ಲಾ. ಯಾವುದೇ ಕಾರಣಕ್ಕೂ ಸಾರಿಗೆ ನೌಕರರ ಷರತ್ತುಗಳನ್ನು ಒಪ್ಪಲ್ಲ. ಸಂಬಳ ಕೊಡಲ್ಲ. ಈಗಾಗಲೇ 8 ರಲ್ಲಿ 9 ಷರತ್ತುಗಳನ್ನು ಒಪ್ಪಿದ್ದೇವೆ. ಉಪ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮೂರು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಬಸವಕಲ್ಯಾಣದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.