ಬೆಂಗಳೂರು: ಪೊಲೀಸ್ ಪಡೆಗಳು ಕರಸೇವಕರಿಗೆ ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು ಎಂದು ಟ್ವೀಟ್ ಮಾಡುವ ಮೂಲಕ ನಟಿ ಪ್ರಣಿತಾ ಶುಭಾಷ್ ಅವರು ಪ್ರಶ್ನೆ ಮಾಡಿದ್ದಾರೆ.
ನಿನ್ನೆ ಬಾಬ್ರಿ ಮಸೀದಿಯ ಧ್ವಂಸ ಪ್ರಕರಣದ ತೀರ್ಪು ಬಂದಿದ್ದು, ಈ ಪ್ರಕರಣದ 32 ಮಂದಿ ಆರೋಪಿಗಳನ್ನು ಕೋರ್ಟ್ ಖುಲಾಸೆ ಮಾಡಿದೆ. ಈ ಮೂಲಕ ಬಾಬ್ರಿ ಮಸೀದಿಯನ್ನು ಯಾರೂ ಬೇಕೆಂದು ಧ್ವಂಸ ಮಾಡಿಲ್ಲ. ಅದು ಆಚಾನಾಕ್ ಆಗಿ ನಡೆದಿರುವ ಘಟನೆ ಎಂದು ತೀರ್ಪು ಬಂದಿದೆ. ಈ ತೀರ್ಪಿನ ವಿಚಾರವಾಗಿ ಪರ ವಿರೋಧದ ಚರ್ಚೆಯಾಗುತ್ತಿದೆ.
Advertisement
https://twitter.com/pranitasubhash/status/1311243264624701440
Advertisement
ಈಗ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಬಂದ ನಂತರ ಟ್ವೀಟ್ ಮಾಡಿರುವ ನಟಿ ಪ್ರಣಿತಾ ಸುಭಾಷ್ ಅವರು, ರಾಜಕೀಯ ನಾಯಕರನ್ನು ಬಂಧಿಸಿದಾಗ ಕಾನೂನಿನ ನಿಯಮ ಎಲ್ಲಿತ್ತು? ಪೊಲೀಸ್ ತಂಡ ಕರಸೇವಕರ ಮೇಲೆ ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು. ಕ್ಷಮಿಸಿ ಆದರೆ ಮರೆಯಬೇಡಿ ಎಂದು ಟ್ವೀಟ್ ಮಾಡಿದ್ದಾರೆ. ಜೊತೆಗೆ ಬಾಬ್ರಿ ಮಸೀದಿ ಧ್ವಂಸ ಎಂಬ ಹ್ಯಾಷ್ಟ್ಯಾಗ್ ಬಳಸಿದ್ದಾರೆ.
Advertisement
Advertisement
1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು. ಈಗ ಈ ಪ್ರಕರಣದಲ್ಲಿದ್ದ ಎಲ್ಲ ಆರೋಪಿಗಳು ಖುಲಾಸೆಯಾಗಿದ್ದಾರೆ.
ಖಲಾಸೆಯಾದ ಆರೋಪಿಗಳು:
ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್ ಪಾಂಡೆ, ವಿಜಯ್ ಬಹದ್ದೂರ್ ಸಿಂಗ್, ಆರ್ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.