ಮಂಗಳೂರು: ಪಶ್ಚಿಮ ಘಟ್ಟಗಳು ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಮಣ್ಯದಲ್ಲಿರುವ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪರಿಸರದಲ್ಲೂ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಕುಮಾರಧಾರ ನದಿಯ ಹೊಸಮಠ ಹಾಗೂ ನೇತ್ರಾವತಿ ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿ ಹರಿಯುತ್ತಿದೆ. ಇದೇ ರೀತಿ ಮಳೆ ಮುಂದುವರಿದರೆ ತಗ್ಗು ಪ್ರದೇಶದ ಹಲವಾರು ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಮಳೆ ಅರ್ಭಟ- ಜನರಲ್ಲಿ ಭೂಕುಸಿತದ ಆತಂಕ
Advertisement
Advertisement
ಈಗಾಗಲೇ ನದಿ ತೀರದ ಬಹುತೇಕ ಎಲ್ಲಾ ಕೃಷಿ ಭೂಮಿಗಳಿಗೂ ನೀರು ನುಗ್ಗಿ ಮುಳುಗುತ್ತಿವೆ. ಇನ್ನು ಬಂಟ್ವಾಳ ತಾಲೂಕಲ್ಲಿ ನೇತ್ರಾವತಿ ತುಂಬಿ ಹರಿಯುತ್ತಿದ್ದು, ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಮುಂದುವೆರೆಯುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇದನ್ನೂ ಓದಿ: KRS ಡ್ಯಾಂಗೆ ಒಂದೇ ದಿನ 20,488 ಕ್ಯೂಸೆಕ್ ಒಳಹರಿವು