ಗಾಂಧೀನಗರ: ಕಲುಷಿತ ನೀರನ್ನು ಸೇವಿಸಿದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೂರತ್ ನಗರದ ಕ್ಯಾಥೋರ್ ಗ್ರಾಮದಲ್ಲಿ ನಡೆದಿದೆ.
ಮೇ 30 ಮತ್ತು ಮೇ 31ರ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಈ ಮುನ್ನ ಸೂರತ್ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ವಿವೇಕ್ ನಗರದ ಕಾಲೋನಿಗೆ ಭೇಟಿ ನೀಡಿ ಗ್ರಾಮಸ್ಥರಿಗೆ ಕ್ಲೋರಿನ್ ಮೆಡಿಸಿನ್ ವಿತರಿಸಿದ್ದರು.
Advertisement
Advertisement
ಘಟನೆ ಕುರಿತಂತೆ ತನಿಖೆ ವೇಳೆ ಗ್ರಾಮಸ್ಥರು ಕಲುಷಿತ ನೀರನ್ನು ಸೇವಿಸಿದ್ದರಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಅಲ್ಲದೆ ಕುಡಿಯುವ ನೀರಿನ ಪೈಪ್ಲೈನ್ನಲ್ಲಿ ಸೋರಿಕೆ ಕಂಡುಬಂದಿದ್ದು, ಒಳಚರಂಡಿ ನೀರಿನೊಂದಿಗೆ ಬೆರೆತು ನೀರು ಕಲುಷಿತಗೊಂಡಿರುವ ವಿಚಾರ ಬಹಿರಂಗಗೊಂಡಿದೆ. ಇದನ್ನು ಓದಿ: ಭಯೋತ್ಪಾದಕರ ಗುಂಡಿನ ದಾಳಿಗೆ ಬಿಜೆಪಿ ಕೌನ್ಸಿಲರ್ ಬಲಿ
Advertisement
ಸೂರತ್ ಮಹಾನಗರ ಪಾಲಿಕೆ ಜನರಿಗೆ ಮೂಲಭೂತ ಸೌಲಭ್ಯ ಒದಗಿಸುತ್ತಿಲ್ಲ ಎಂದು ಸ್ಥಳೀಯ ಮುಖಂಡರಾದ ದರ್ಶನ್ ನಾಯಕ್ ಆರೋಪಿಸಿದ್ದಾರೆ ಹಾಗೂ ಮೃತರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿದ್ದಾರೆ.
Advertisement
ಸೂರತ್ ಮೇಯರ್ ಹೇಮಾಲಿ ವೋಘವಾಲಾರವರು ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಬುಧವಾರ ಒಂದು ಲಕ್ಷ ಪರಿಹಾರ ಘೋಷಿಸಿದ್ದಾರೆ.