ಮಂಗಳೂರು: ಕೆಪಿಸಿಸಿ ಅಧ್ಯಕ್ಷರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರ ಜೊತೆಗಿದ್ದ ಕಾಂಗ್ರೆಸ್ ನಾಯಕರಿಗೆ ಕ್ವಾರಂಟೈನ್ ನಿಯಮ ಅನ್ವಯಿಸುವುದಿಲ್ಲವೇ ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಪ್ರಶ್ನಿಸಿದ್ದಾರೆ.
Advertisement
ನಗರದಲ್ಲಿ ಮಾತನಾಡಿದ ಅವರು, ಜುಲೈ.31ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅದೇ ದಿನ ಕೊರೊನಾ ಪಾಸಿಟಿವ್ ಬಂದಿದ್ದ ಐವನ್ ಡಿಸೋಜಾ ಹಾಗೂ 12 ದಿನದ ಮೊದಲು ಕೊರೊನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಪೂರೈಸದಿರುವ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ರಾಜ್ಯಾಧ್ಯಕ್ಷರ ಎಡ ಬಲದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜಿಲ್ಲಾ ಪ್ರವಾಸದಲ್ಲಿ ಇದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು ಎಂದು ವಿವರಿಸಿದರು.
Advertisement
Advertisement
ಇದೀಗ ಐವಾನ್ ಡಿಸೋಜಾ ಅವರಿಗೆ ಕೊರೊನಾ ದೃಢಪಟ್ಟಿದ್ದು, ಇವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ ರೈ ಹಾಗೂ ಯು.ಟಿ.ಖಾದರ್ ಕೂಡ ಇದ್ದರು. ಈ ಜಿಲ್ಲಾ ಪ್ರವಾಸದಲ್ಲಿದ್ದ ಡಿ.ಕೆ.ಶಿವಕುಮಾರ್ ಸಹಿತ ಅವರ ಜೊತೆಗಿದ್ದ ಕಾಂಗ್ರೆಸ್ ನಾಯಕರು ಯಾವಾಗ ಕ್ವಾರಂಟೈನ್ ಆಗುತ್ತಾರೆ, ಇವರಿಗೆ ಈ ನೆಲದ ಕಾನೂನು ಅನ್ವಯವಾಗುದಿಲ್ಲವೆ, ಕ್ವಾರಂಟೈನ್ ನಿಯಮಗಳಿಂದ ಕಾಂಗ್ರೆಸ್ ನಾಯಕರಿಗೆ ವಿನಾಯಿತಿ ಇದೆಯೇ ಎಂಬುದನ್ನು ಕಾಂಗ್ರೆಸ್ ನಾಯಕರು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ.