ಬೆಂಗಳೂರು: ಕಾಂಗ್ರೆಸ್ ನಾಯಕಿ ಹಾಗೂ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಅವರಿಗೆ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಕುಸುಮಾ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ‘ನನ್ನ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಮನೆಯಲ್ಲಿಯೇ ಐಸೋಲೇಟ್ ಆಗಿದ್ದು, ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕಕೆ ಬಂದಿರುವವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
Advertisement
Advertisement
ಮಹಾಮಾರಿ ಕೊರೊನಾ ಎರಡನೇ ಅಲೆಯು ತೀವ್ರ ತರವಾಗಿದ್ದು ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಕ್ಯಾಪ್ಷನ್ ಹಾಕಿಕೊಳ್ಳುವ ಮೂಲಕ ಹಂಚಿಕೊಂಡಿದ್ದಾರೆ.
Advertisement
ಈ ಹಿಂದೆ ರಾಜರಾಜೇಶ್ವರಿ ನಗರದ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಸ್ಪರ್ಧಿಸಿದ್ದರು.