ಬೆಂಗಳೂರು: ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್ ಧರಿಸಬೇಕು ಎಂಬ ಆದೇಶವನ್ನು ಬಿಬಿಎಂಪಿ ವಾಪಸ್ ಪಡೆದಿದೆ.
ಈ ಹಿಂದೆ ಕಿಟಿಕಿ ಮುಚ್ಚಿದ ಕಾರಿನಲ್ಲಿ ಒಬ್ಬರೆ ಪ್ರಯಾಣಿಸುತ್ತಿದ್ದಾಗ ಮಾಸ್ಕ್ ಧರಿಸಬೇಕು ಎಂದು ಬಿಬಿಎಂಪಿ ಆದೇಶ ಪ್ರಕಟಿಸಿತ್ತು. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಆದೇಶದ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
Advertisement
Advertisement
ಸಾರ್ವಜನಿಕರ ಆಕ್ರೋಶದ ನಂತರ ತಜ್ಞರ ಸಲಹೆ ಕೋರಿ ಆರೋಗ್ಯ ಇಲಾಖೆಗೆ ಮಂಜುನಾಥ್ ಪ್ರಸಾದ್ ಪತ್ರ ಬರೆದಿದ್ದರು. ತಜ್ಞರ ಸಲಹೆಯಂತೆ ಕಾರಿನಲ್ಲಿ ಮುಚ್ಚಲ್ಪಟ್ಟ ಕಿಟಕಿಯೊಂದಿಗೆ ಪ್ರಯಾಣ ನಡೆಸುವವರು ಇನ್ನು ಮುಂದೆ ಮಾಸ್ಕ್ ಧರಿಸಬೇಕಿಲ್ಲ. ಆದರೆ ಆದರೆ ದ್ವಿಚಕ್ರ ವಾಹನ ಸವಾರರು ಒಬ್ಬರೆ ಇದ್ದರೂ ಮಾಸ್ಕ್ ಧರಿಸುವುದು ಕಡ್ಡಾಯ.
Advertisement