– ಕಾರ್ಮಿಕ ಸಚಿವರಿಗೆ ಕೈ ನಾಯಕರಿಂದ ದೂರು
ಹುಬ್ಬಳ್ಳಿ: ಕಾರ್ಮಿಕರಿಗೆ ನೀಡುವ ಕಿಟ್ ಕಲಘಟಗಿ ಬಿಜೆಪಿ ಶಾಸಕರ ಕಚೇರಿಯಲ್ಲಿಯೇ ಉಳಿದುಕೊಂಡಿದೆ. ಅಲ್ಲದೆ ಕಾರ್ಮಿಕರಿಗೆ ಬಿಟ್ಟು ಶಾಸಕ ಸಿ.ಎಂ ನಿಂಬಣ್ಣವರ ಅವರು ಬಿಜೆಪಿ ಕಾರ್ಯಕರ್ತರಿಗೆ ಕಿಟ್ ಕೊಡುತ್ತಾರೆ ಎಂದು ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ ನಿಂಬಣ್ಣವರಿಂದ ಕಿಟ್ ದುರ್ಬಳಕೆ ಆರೋಪ ಕೇಳಿ ಬಂದಿದೆ. ಕಾರ್ಮಿಕ ಇಲಾಖೆ ನೀಡುವ ಕಿಟ್ಗಳನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಗಂಭೀರವಾಗಿ ಆರೋಪಿಸಿದ್ದಾರೆ.
Advertisement
Advertisement
ಲಾಕ್ ಡೌನ್ನಿಂದ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ದಿನಬಳಕೆಯ ಕಿಟ್ಗಳನ್ನ ಸರ್ಕಾರ ನೀಡಿದ್ದು, ಆದರೆ ಶಾಸಕರು ಕಾರ್ಮಿಕರ ಕಿಟ್ಗಳನ್ನ ಬಿಜೆಪಿ ಕಾರ್ಯಕರ್ತರಿಗೆ ಹಂಚುತ್ತಿದ್ದಾರೆ. ಕಾರ್ಮಿಕ ಇಲಾಖೆಯಲ್ಲಿರಬೇಕಾದ ಕಿಟ್ಗಳನ್ನು ಶಾಸಕರ ಕಚೇರಿಯಲ್ಲಿ ಇಟ್ಟಿರುವುದು ಯಾಕೆ ಎಂಬುವುದು ಕಾಂಗ್ರೆಸ್ ಮುಖಂಡರ ಪ್ರಶ್ನೆಯಾಗಿದೆ.
Advertisement
ಕಾಂಗ್ರೆಸ್ ಮುಖಂಡರು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹಾಗೂ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.