ಹಾಸನ: ತಾಲೂಕಿನ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯಿಂದ ಬಂದಿರುವ ಆಹಾರ ಕಿಟ್ಗಳನ್ನು ಹಾಸನ ವಿಧಾನ ಸಭಾ ಕ್ಷೇತ್ರದ ಶಾಸಕರು ಅವರ ಆಪ್ತರು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ದುರುಪಯೋಗಪಡಿಸಿಕೊಂಡಿರುವ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು, ಕಾರ್ಮಿಕರು ಹಾಗೂ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಲಾಕ್ಡೌನ್ ಹಿನ್ನೆಲೆಯಲ್ಲಿ ಹಾಸನ ನಗರ ಕಟ್ಟಡ ಕಾರ್ಮಿಕ ಕುಟುಂಬದವರಿಗೆ ಕಾರ್ಮಿಕ ಮಂಡಳಿ ಕಾರ್ಮಿಕ ಕಲ್ಯಾಣ ನಿಧಿಯಿಂದ ಸುಮಾರು 10,000 ಕಿಟ್ಗಳು ಬಂದಿದೆ. ಆದರೆ ಹಾಸನ ಕ್ಷೇತ್ರದ ಶಾಸಕರು ಮನಸೋಯಿಚ್ಚೆ ತಮ್ಮ ರಾಜಕೀಯಕ್ಕೋಸ್ಕರ ತಮ್ಮ ಪಕ್ಷದ ನಗರಸಭಾ ಸದಸ್ಯರುಗಳ ಮೂಲಕ ತಮಗೆ ಬೇಕಾದ ಹಾಸನದ ಕೆಲವು ವಾರ್ಡ್ ಗಳಿಗೆ ಕಟ್ಟಡ ಕಾರ್ಮಿಕರಿಗೆ ನೀಡಬೇಕಾಗಿತ್ತು. ಆದ್ರೆ ಆಹಾರ ಕಿಟ್ಗಳನ್ನು ಹಾಸನ ನಗರದಲ್ಲಿರುವ ಕೆಲವು ಆಯ್ದ ಭಾಗಗಳಲ್ಲಿ ಕಟ್ಟಡ ಕಾರ್ಮಿಕರಲ್ಲದೇ ಇರುವವರಿಗೆ ವಿತರಣೆ ಮಾಡಿದ್ದಾರೆ ಎಂದು ಆರೋಪಿಸಿದರು.
Advertisement
Advertisement
ಇದು ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ನೀಡಿದ್ದ ಕಿಟ್ಗಳನ್ನು ದುರುಪಯೋಗ ಪಡಿಸಿಕೊಂಡು ಕಾನೂನು ಬಾಹಿರ ಚಟುವಟಿಕೆ ಮಾಡಿದ್ದಾರೆ. ವಂಚಿತರಾದ ನೋಂದಾಯಿತ ಕಟ್ಟಡ ಕಾರ್ಮಿಕರು ನನ್ನನ್ನು ಖುದ್ದಾಗಿ ಸಂಪರ್ಕಿಸಿ ಕಟ್ಟಡ ಕಾರ್ಮಿಕರ ಆಹಾರ ಕಿಟ್ ವಿತರಣೆಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ತಿಳಿಸಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳನ್ನು ಈ ಬಗ್ಗೆ ವಿಚಾರಿಸಿದಾಗ ಸಮರ್ಪಕವಾದ ಉತ್ತರ ಸಿಕ್ಕಿಲ್ಲ.
Advertisement
https://twitter.com/iPrajwalRevanna/status/1409815182746918913
Advertisement
ಸರ್ಕಾರದ ಆಹಾರ ಕಿಟ್ಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಅರ್ಹ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ ಮಾಡದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟವನ್ನು ಮಾಡಲಾಗುವುದು ಎಂದು ಪ್ರಜ್ವಲ್ ರೇವಣ್ಣ ಎಚ್ಚರಿಸಿದರು. ಅಕ್ರಮದ ವಿರುದ್ಧ ಶೀಘ್ರವಾಗಿ ಕ್ರಮ ಕೈಗೊಳ್ಳದೇ ಇದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ನಮ್ಮಪ್ಪ ಮದುವೆ ಆಗು ಅಂತಿದ್ದಾರೆ ಏನು ಮಾಡೋಣ- ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಹಾಸ್ಯ
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ಎಸ್.ದ್ಯಾವೇಗೌಡ, ಜಿ.ಪಂ ಉಪಾಧ್ಯಕ್ಷ ಸ್ವರೂಪ್, ರಘು ಹೊಂಗೆರೆ, ಗಿರೀಶ್ ಚನ್ನವೀರಪ್ಪ, ನಗರಸಭೆ ಮಾಜಿ ಅಧ್ಯಕ್ಷ ಶಂಕರ್ , ಅಗಿಲೆ ಯೋಗೇಶ್, ಶ್ರೀಕಾಂತ್ ಸೇರಿದಂತೆ ಕಾರ್ಮಿಕರು ಭಾಗವಹಿಸಿದ್ದರು. ಇದನ್ನೂ ಓದಿ: ಉತ್ತಮ ರಸ್ತೆ ಕಿತ್ತು ಕಳಪೆ ಕಾಮಗಾರಿ ನಡೆಸುತ್ತಿದ್ದಾರೆ: ಸಂಸದ ಪ್ರಜ್ವಲ್ ರೇವಣ್ಣ