ನವದೆಹಲಿ: ಪತ್ನಿಯೊಂದಿಗೆ ಜಗಳ ಮಾಡಿಕೊಂಡು ವ್ಯಕ್ತಿಯೊಬ್ಬ ಕೋಪದಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನದಲ್ಲಿ ಕಿವಿಗೆ ಗುಂಡು ಹಾರಿಸಿಕೊಂಡಿದ್ದು, ಅದು ತಲೆಯೊಳಗೆ ಹೊಕ್ಕಿ ಪತ್ನಿಗೂ ತಗುಲಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ರಾಂಪುರಾ ಫ್ಲೈಓವರ್ ಮೇಲೆ ಶುಕ್ರವಾರ ರಾತ್ರಿ ಸುಮಾರು 10 ಗಂಟೆಗೆ ಈ ಘಟನೆ ನಡೆದಿದೆ. 34 ವರ್ಷದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದು, ಸದ್ಯ ಪತ್ನಿ ಚೇತರಿಸಿಕೊಳ್ಳುತ್ತಿದ್ದಾರೆ.
Advertisement
Advertisement
ದಂಪತಿ ಫರಿದಾಬಾದ್ ಮೂಲದವರಾಗಿದ್ದು, ಐದು ತಿಂಗಳ ಹಿಂದೆ ಗುರುಗ್ರಾಮಕ್ಕೆ ಬಂದಿದ್ದರು. ಆದರೆ ಈ ವ್ಯಕ್ತಿ ಕೆಲವು ತಿಂಗಳಿಂದ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದನು. ಈತನ ಪತ್ನಿ ಏಳು ತಿಂಗಳ ಗರ್ಭಿಣಿಯಾಗಿದ್ದು, ಚೆಕಪ್ ಆಗಿ ಪತ್ನಿಯನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗುತ್ತಿದ್ದನು. ಈ ಸಂದರ್ಭದಲ್ಲಿ ಘಟನೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
Advertisement
ಕ್ಲಿನಿಕ್ಗೆ ಹೋಗುವ ದಾರಿಯಲ್ಲಿ ದಂಪತಿ ಜಗಳ ಮಾಡಿಕೊಂಡಿದ್ದಾರೆ. ನಂತರ ಪತಿ ಪತ್ನಿಯನ್ನು ಪೋಷಕರ ಮನೆಗೆ ಕರೆದುಕೊಂಡು ಹೋಗಲು ನಿರ್ಧರಿಸಿದ್ದನು. ಆದರೆ ಪತ್ನಿ ಪೋಷಕರ ಮನೆಗೆ ಹೋಗಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ವ್ಯಕ್ತಿ ಪಿಸ್ತೂಲ್ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾನೆ.
Advertisement
ಪಿಸ್ತೂಲಿನಿಂದ ತನಗೆ ಗುಂಡು ಹಾರಿಸಿಕೊಂಡಿದ್ದಾನೆ. ಆದರೆ ಕಿವಿಗೆ ಫೈರಿಂಗ್ ಮಾಡಿಕೊಂಡಿದ್ದರಿಂದ ಬುಲೆಟ್ ಆತನ ತಲೆಯೊಳಗೆ ಹೊಕ್ಕಿ ಮತ್ತೊಂದು ಕಡೆಯಿಂದ ಬಂದು ಆತನ ಪಕ್ಕದಲ್ಲಿ ಕುಳಿತಿದ್ದ ಪತ್ನಿಯ ಕುತ್ತಿಗೆಗೆ ತಾಕಿದೆ. ಸ್ಥಳೀಯರು ಕಾರಿನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ದಂಪತಿಯನ್ನು ನೋಡಿ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸಫ್ದಾರ್ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಗಾಯಗೊಂಡಿದ್ದ ಪತ್ನಿಯಿಂದ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ದಕ್ಷಿಣ ವಲಯದ ಡಿಸಿಪಿ ದೀಪಕ್ ಸೆಹ್ರಾವತ್ ತಿಳಿಸಿದ್ದಾರೆ. ಪತಿ ಕಳೆದ ನಾಲ್ಕು ದಿನಗಳಿಂದ ನಿರುದ್ಯೋಗದ ಕಾರಣ ಜಗಳ ಮಾಡುತ್ತಿದ್ದಾರೆ. ಅಲ್ಲದೇ ನಿರುದ್ಯೋಗದಿಂದಾಗಿ ತೀವ್ರ ಖಿನ್ನತೆಗೆ ಒಳಗಾಗಿದ್ದ ಎಂದು ಪತ್ನಿ ಪೊಲೀಸರ ಬಳಿ ತಿಳಿಸಿದ್ದಾರೆ.