ಬೆಂಗಳೂರು: ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯಡಿ ಸೋಮವಾರ ಎರಡನೇ ಕಂತಿನಲ್ಲಿ ಕರ್ನಾಟಕ ರಾಜ್ಯದ 51.19 ಲಕ್ಷ ರೈತರಿಗೆ 1,023 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದ್ದು, ಎರಡನೇ ಕಂತಿನಲ್ಲಿ ಬಿಡುಗಡೆಯಾದ ಹಣವನ್ನು ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಫೆ.1 2019 ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಈ ಅನುದಾನವನ್ನು 2 ಸಾವಿರ ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
Advertisement
Advertisement
ಇಲ್ಲಿಯವರೆಗೆ 55.06 ಲಕ್ಷ ರೈತ ಕುಟುಂಬಗಳು 1 ಕಂತು ಪಡೆಯುವ ಮೂಲಕ ಯೋಜನೆಯ ಲಾಭವನ್ನು ಪಡೆದಿದ್ದು, 2019ರ ಮಾರ್ಚ್ ನಿಂದ ಜುಲೈ 2021 ರವರೆಗೆ ಕೇಂದ್ರ ಸರ್ಕಾರದಿಂದ ಒಟ್ಟು 6,940.07 ಕೋ.ರೂಗಳ ಆರ್ಥಿಕ ಸಹಾಯಧನವನ್ನು ನೀಡಲಾಗಿರುತ್ತದೆ. ಇದನ್ನೂ ಓದಿ : ನನಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡ: ಅರಗ ಜ್ಞಾನೇಂದ್ರ
Advertisement
2021 ಪ್ರಸಕ್ತ ವರ್ಷದ ಎರಡನೇ ಕಂತಿನಲ್ಲಿ 51.19 ಲಕ್ಷ ರೈತರಿಗೆ 1,023 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಅನುಮೋದಿಸಲ್ಪಟ್ಟ ರೈತರಿಗೆ ಎರಡು ಕಂತುಗಳಲ್ಲಿ ವರ್ಷಕ್ಕೆ 4 ಸಾವಿರ ರೂ.ನಂತೆ ಆರ್ಥಿಕ ನೆರವು ವರ್ಗಾವಣೆಗೆ ಆದೇಶ ಹೊರಡಿಸಲಾಗಿದ್ದು, ಇಲ್ಲಿಯವರೆಗೆ 2,849.16 ಕೋಟಿ ರೂ.ಗಳ ಆರ್ಥಿಕ ಸಹಾಯಧನವನ್ನು ನೀಡಲಾಗಿರುತ್ತದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
Advertisement
ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಪಾವತಿ ಮಾಡಲಾಗುತ್ತಿದ್ದು, ದೇಶದಲ್ಲಿ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತಿಹೆಚ್ಚು ಶೇಕಡಾವಾರು ಆಧಾರ್ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದರಿಂದ 2020-21 ರಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿಯೂ ದೊರೆತಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
ಪ್ರಧಾನಿ ಶ್ರೀ @narendramodi ಅವರು ಇಂದು "ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ"ಯಡಿ 19,509 ಕೋಟಿ ರೂಪಾಯಿಗಳನ್ನು 9.75 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ನೇರ ವರ್ಗಾವಣೆ ಮಾಡಿದರು.#PMKisan | #PMKisanSammanNidhi pic.twitter.com/JYTjdxuxxU
— Kourava B.C.Patil (@bcpatilkourava) August 9, 2021