ನೆಲಮಂಗಲ: ಒಂದು ತಿಂಗಳ ಹಿಂದೆ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಹೊರವಲಯ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
Advertisement
ಕಳೆದ ತಿಂಗಳು ನೆಲಮಂಗಲ ಸಮೀಪದ ಗೋಪಾಲಪುರ ಗ್ರಾಮದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ಸ್ಥಳೀಯ ಸಿಸಿ ಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಖೆಡ್ಡಾಗೆ ಕೆಡವಿದ್ದಾರೆ. ಇದನ್ನೂ ಓದಿ: ಅಕ್ರಮ ಸಂಬಂಧ ಶಂಕೆ- ಪತ್ನಿಯ ಗುಪ್ತಾಂಗಕ್ಕೆ ಹೊಲಿಗೆ
Advertisement
ಮಾಗಡಿ ರಸ್ತೆಯ ಅಂದ್ರಹಳ್ಳಿಯ ಮಂಜುನಾಥ್ ಅಲಿಯಾಸ್ ಮಂಜ ಬಂಧಿತ ಆರೋಪಿ ಆಗಿದ್ದು, ಬಂಧಿತನಿಂದ 150 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಮಂಜ ಮನೆಯಲ್ಲಿ ಯಾರು ಇಲ್ಲದನ್ನು ಸೂಕ್ಷ್ಮವಾಗಿ ಗಮನಿಸಿ, ನಂತರ ಆ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ. ಅಲ್ಲದೆ ಮನೆಯಲ್ಲಿ ಕಳ್ಳತನವಾಗಿದೆ ಎಂಬುದು ಮನೆಯವರಿಗೂ ಅನುಮಾನ ಬಾರದಂತೆ ಸೂಕ್ಷ್ಮವಾಗಿ ಕಳ್ಳತನ ಮಾಡುವ ಪರಿಣಿತನಾಗಿದ್ದ.
Advertisement
Advertisement
ಮಾದನಾಯಕನಹಳ್ಳಿ ಸಿಪಿಐ ಮಂಜುನಾಥ್ ಹಾಗೂ ಪಿಎಸ್ಐ ದಾಳೇಗೌಡ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಸಿ ಟಿವಿಯ ದೃಶ್ಯಗಳನ್ನು ಆಧರಿಸಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾರಿಗೆ ಮೂತ್ರ ಮಾಡಿದ ನಾಯಿ- ಕಾರ್ ಮಾಲೀಕನಿಗೆ ಬಿತ್ತು ಗೂಸಾ