ಬೆಂಗಳೂರು: ಕುಡಿಯಲು ಹಣ ನೀಡದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ.
ಆನೇಕಲ್ನ 3ನೇ ಜಿಲ್ಲಾ ಸತ್ರ ನ್ಯಾಯಾಲಯ ಈ ಮಹತ್ವದ ತೀರ್ಪು ಪ್ರಕಟಿಸಿದ್ದು, ಮೌಲಾ(45) ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ. ನ್ಯಾಯಾಧೀಶರಾದ ಸೈಯದ್ ಬಲಿಗೂರ್ ರೆಹಮಾನ್ ಅವರು ತಿರ್ಪು ಪ್ರಕಟಿಸಿದ್ದು, ಸರ್ಕಾರಿ ಅಭಿಯೋಜಕರಾಗಿ ಗಣೇಶ್ ನಾಯಕ್ ವಾದ ಮಂಡಿಸಿದ್ದರು.
Advertisement
Advertisement
ಕುಡಿಯಲು ಹಣ ನೀಡದ ಕಾರಣ ಪತ್ನಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. 2014ರಲ್ಲಿ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಆರೋಪಿ ಮೌಲಾ ತನ್ನ ಪತ್ನಿ ಜಬಿನಾಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದ.