ಬೆಂಗಳೂರು : ಉಕ್ಕಿನ ನಗರಿ ಭದ್ರಾವತಿಯ ಆರ್ಎಎಫ್ ಘಟಕದ ಶಂಕು ಸ್ಥಾಪನೆ ವೇಳೆ ಕನ್ನಡ ಕಡೆಗಣನೆ ಬಗ್ಗೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಬಿಎಸ್ ವೈ ಮತ್ತು ಅಮಿತ್ ಶಾ ವಿರುದ್ಧ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕನ್ನಡ ಕಡೆಗಣನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅವರು, ಅಮಿತ್ ಶಾ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
Advertisement
'ಇಂಗ್ಲೀಷ್ ಮರದ ದೊಣ್ಣೆಯಾದರೆ ಹಿಂದಿ ಕಬ್ಬಿಣದ ಸಲಾಕೆ' ಎಂದು ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸಿದ್ದ ರಾಷ್ಟ್ರಕವಿ ಕುವೆಂಪು ಅವರು ಹುಟ್ಟಿದ ಜಿಲ್ಲೆಯಲ್ಲೇ ಕನ್ನಡಕ್ಕೆ ನೆಲೆ ಸಿಗದಂತಾದರೂ ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಇದನ್ನು ಕಂಡು ಕಾಣದಂತೆ ಮೌನವಹಿಸಿರುವುದು ನಿಜಕ್ಕೂ ಬೇಸರದ ವಿಚಾರವಾಗಿದೆ. 2/3
— Nikhil Kumar (@Nikhil_Kumar_k) January 17, 2021
Advertisement
ʼಇಂಗ್ಲೀಷ್ ಮರದ ದೊಣ್ಣೆಯಾದರೆ ಹಿಂದಿ ಕಬ್ಬಿಣದ ಸಲಾಕೆ’ ಎಂದು ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸಿದ್ದ ರಾಷ್ಟ್ರಕವಿ ಕುವೆಂಪು ಅವರು ಹುಟ್ಟಿದ ಜಿಲ್ಲೆಯಲ್ಲೇ ಕನ್ನಡಕ್ಕೆ ನೆಲೆ ಸಿಗದಂತಾದರೂ ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಇದನ್ನು ಕಂಡು ಕಾಣದಂತೆ ಮೌನವಹಿಸಿರುವುದು ನಿಜಕ್ಕೂ ಬೇಸರದ ವಿಚಾರ ಅಂತಿದ್ದಾರೆ.
Advertisement
ಶಿವಮೊಗ್ಗದ ಅರ್.ಎ.ಎಫ್ ಘಟಕದ ಶಂಕು ಸ್ಥಾಪನೆ ಕಾರ್ಯಕ್ರಮವನ್ನು ವೀಕ್ಷಿಸುವಾಗ ಈ ಕಾರ್ಯಕ್ರಮ ಭದ್ರಾವತಿಯ ಬದಲು ದೆಹಲಿಯಲ್ಲಿ ನಡೆದಂತಿತ್ತು. ಒಂದು ಅಕ್ಷರವೂ ಕನ್ನಡ ಪದ ಬಳಕೆ ಮಾಡದೇ ಮಾನ್ಯ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಶಂಕುಸ್ಥಾಪನೆ ನೆರವೇರಿಸಿರುವುದು ಕೇಂದ್ರ ಸರ್ಕಾರದ ಕನ್ನಡ ವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
Advertisement
ಇನ್ನಾದರೂ ತ್ರಿಭಾಷಾ ಸೂತ್ರದಂತೆ ಕನ್ನಡ ಫಲಕವನ್ನು ಅಳವಡಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ.3/3
— Nikhil Kumar (@Nikhil_Kumar_k) January 17, 2021
ಬೇಸರ ವ್ಯಕ್ತಪಡಿಸಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಅವರು ರಾಜ್ಯ ಸರಕಾರ ಇನ್ನಾದರೂ ತ್ರಿಭಾಷಾ ಸೂತ್ರದಂತೆ ಕನ್ನಡ ಫಲಕವನ್ನು ಅಳವಡಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ ಅಂತಾ ಟ್ವಿಟ್ಟರ್ ನಲ್ಲಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.