ಮಡಿಕೇರಿ: ಕಂದಾಯ ಸಚಿವರಾದ ಆರ್ ಅಶೋಕ್ ಅವರು ನೂತನವಾಗಿ ರಚನೆಗೊಂಡಿರುವ ಕೊಡಗು ಜಿಲ್ಲೆಯ ಐದನೇ ತಾಲೂಕು ಕುಶಾಲನಗರದ ಅಧಿಕೃತ ಕಾರ್ಯಾರಂಭಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಆರ್. ಅಶೋಕ ಅವರು “ಕುಶಾಲನಗರ ತಾಲೂಕು ಕೇಂದ್ರವಾಗಬೇಕು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು 20-30 ಬಾರಿ ಕಚೇರಿಗೆ ಬಂದು ವಿನಂತಿಸಿದ್ದಾರೆ. ಅಪ್ಪಚ್ಚು ರಂಜನ್ ಅವರ ಪ್ರಯತ್ನದಿಂದ ಕುಶಾಲನಗರ ತಾಲೂಕು ಕೇಂದ್ರವಾಗಿದೆ. ಇಲ್ಲಿನ ಶಾಸಕರ ಹೋರಾಟದ ಫಲವಾಗಿ ಕುಶಾಲನಗರ ತಾಲ್ಲೂಕು ಅಸ್ತಿತ್ವಕ್ಕೆ ಬಂದಿದೆ” ಎಂದು ಕಂದಾಯ ಸಚಿವರು ಹೇಳಿದರು.
Advertisement
ನೂತನವಾಗಿ ರಚನೆಗೊಂಡಿರುವ ಕೊಡಗು ಜಿಲ್ಲೆಯ ಐದನೇ ತಾಲ್ಲೂಕು ಕುಶಾಲನಗರದ ಅಧಿಕೃತ ಕಾರ್ಯಾರಂಭಕ್ಕೆ ಇಂದು ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ತಾಲ್ಲೂಕು ಹೋರಾಟಗಾರರು ಭಾಗಿಯಾಗಿದ್ದರು.#Kodagu #kushalanagara pic.twitter.com/iPD5p3Vp7X
— R. Ashoka (ಆರ್. ಅಶೋಕ) (@RAshokaBJP) July 6, 2021
Advertisement
“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಪೊನ್ನಂಪೇಟೆ ಮತ್ತು ಕುಶಾಲನಗರ ನೂತನ ತಾಲೂಕು ಕೇಂದ್ರವಾಗಬೇಕು ಎಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಇಂದು ಕುಶಾಲನಗರ ತಾಲೂಕು ಅಸ್ತಿತ್ವಕ್ಕೆ ಬಂದಿದೆ. ತಾಲ್ಲೂಕು ಕೇಂದ್ರದಲ್ಲಿ ಗ್ರೇಡ್-1 ತಹಶೀಲ್ದಾರರು ಸೇರಿದಂತೆ ಒಟ್ಟು 12 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಜೊತೆಗೆ 50 ಲಕ್ಷ ರೂ. ಹಣ ಬಿಡುಗಡೆ ಮಾಡಲಾಗಿದೆ” ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: KRS ಸುರಕ್ಷಿತವಾಗಿದೆ, ಯಾವುದೇ ತೊಂದರೆ ಇಲ್ಲ: ಅಶೋಕ್
Advertisement
ಕುಶಾಲನಗರ ನೂತನ ತಾಲ್ಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಸನ್ಮಾನ್ಯ ಶ್ರೀ ಆರ್ ಅಶೋಕ್ ರವರು, ಶಾಸಕರಾದ ಸನ್ಮಾನ್ಯ ಶ್ರೀ ಅಪ್ಪಚ್ಚು ರಂಜನ್ ರವರು, ಮಾನ್ಯ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ರವರು
ಜಿಲ್ಲಾಧಿಕಾರಿಗಳಾದ ಚಾರುಲತಾ ಸೋಮಲ್ ರವರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು pic.twitter.com/qq9G9mwWRW
— Pratap Simha (@mepratap) July 6, 2021
Advertisement
“ಸರ್ಕಾರ 2020-21 ನೇ ಸಾಲಿನಲ್ಲಿ ವಿಪತ್ತು ನಿರ್ವಹಣೆ, ಬೆಳೆ ಹಾನಿ ಪರಿಹಾರ, ಕೋವಿಡ್ ನಿರ್ವಹಣೆ ಹೀಗೆ ಹಲವು ವಿಪತ್ತನ್ನು ಎದುರಿಸಲು ಹೆಚ್ಚಿನ ಹಣ ಬಿಡುಗಡೆ ಮಾಡಿದೆ, ಕುಶಾಲನಗರ ತಾಲ್ಲೂಕು ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ನೆರವು ನೀಡಲಾಗುವುದು. ಹಂತ ಹಂತವಾಗಿ ಮೂಲ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುವುದು” ಎಂದು ಭರವಸೆ ನೀಡಿದರು.