ಬೆಂಗಳೂರು: ಕೇಂದ್ರ ಕೃಷಿ ಕಾಯಿದೆ ವಿರೋಧಿಸಿ ಬುಧವಾರ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು, ರೈತ ಸಂಘಟನೆಗಳು ರಾಜಭವನ ಚಲೋ ನಡೆಸಲಿದ್ದಾರೆ. ಬೆಳಗ್ಗೆ ಹನ್ನೊಂದು ಗಂಟೆಗೆ ಮೆಜೆಸ್ಟಿಕ್ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿಯಿಂದ ರ್ಯಾಲಿ ಶುರುವಾಗಲಿದೆ. ಮೆಜೆಸ್ಟಿಕ್ನಿಂದ ಫ್ರೀಡಂ ಪಾರ್ಕ್ ಮಾರ್ಗವಾಗಿ ಸಾಗಿ ರಾಜಭವನ ತಲುಪಲಿದೆ.
ಕಾಂಗ್ರೆಸ್ ಪಕ್ಷದ ನಾಯಕರು, ರೈತ ಸಂಘಟನೆಗಳು ಸೇರಿದಂತೆ ಹದಿನೈದು ಸಾವಿರಕ್ಕೂ ಹೆಚ್ಚು ಜನರು ಈ ರ್ಯಾಲಿಯಲ್ಲಿ ಭಾಗಿಯೋ ಸಾಧ್ಯತೆ ಇದೆ. ರಾಜಭವನ ಚಲೋಗೆ ಪೊಲೀಸರು ಕೂಡ ಎಲ್ಲ ರೀತಿಯ ಬಂದೋಬಸ್ತ್ ಮಾಡಿಕೊಂಡಿದ್ದಾರೆ. ಆದ್ರೆ ನಗರದ ಹೃದಯ ಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರೋದರಿಂದ ಮೆಜೆಸ್ಟಿಕ್ ಸುತ್ತಲಿನ ಕೆ.ಜಿ.ರೋಡ್, ಚಿಕ್ಕಪೇಟೆ ಮುಖ್ಯರಸ್ತೆ, ಫ್ರೀಡಂ ಪಾರ್ಕ್ ರಸ್ತೆ, ಚಾಲುಕ್ಯ ಸರ್ಕಲ್, ಮೌರ್ಯ ಸರ್ಕಲ್, ಕೆಆರ್ ಸರ್ಕಲ್ ಸೇರಿದಂತೆ ಪ್ರಮುಖ ರಸ್ತೆ ಗಳು ಫುಲ್ ಜಾಮ್ ಆಗುವ ಸಾಧ್ಯತೆಗಳಿವೆ ಪರಿಸ್ಥಿತಿ ನೋಡಿಕೊಂಡು ಮಾರ್ಗಬದಲಾಣೆ ಬಗ್ಗೆ ಸೂಕ್ತ ತಿರ್ಮಾನ ಕೈಗೊಳ್ಳಲಾಗುವುದು ಅಂತಾ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.
Advertisement
ಅನ್ನದಾತರು ಕಳೆದ 50 ದಿನಗಳಿಂದ ಪ್ರತಿಭಟಿಸುತ್ತಿದ್ದರೂ ಸ್ಪಂದಿಸದ @BJP4India
ಸರ್ಕಾರದ ವಿರುದ್ಧ ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನ ಹಿಂಪಡೆಯುವಂತೆ ಆಗ್ರಹಿಸಿ ಹಾಗೂ
ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ
ರಾಜಭವನ ಚಲೋ ಕಾರ್ಯಕ್ರಮ.
ಬನ್ನಿ ಸಹಸ್ರ ಸಂಖ್ಯೆಯಲ್ಲಿ ಬಾಗವಹಿಸಿ.
ಜನವಿರೋಧಿ ಸರ್ಕಾರಕ್ಕೆ ಜನಧ್ವನಿ ಮುಟ್ಟಿಸೋಣ. pic.twitter.com/yaelayMsbd
— Karnataka Congress (@INCKarnataka) January 19, 2021
Advertisement
ಈ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ರಾಜಭವನ ಚಲೋಗೆ ಯಾವುದೇ ರೀತಿಯ ಅನುಮತಿ ಇಲ್ಲ. ಆದರೆ ರ್ಯಾಲಿ ಮಾಡುವ ಬಗ್ಗೆ ಅನುಮತಿ ಕೋರಿ ಪತ್ರ ಬಂದಿದ್ದು, ಇನ್ನೂ ಪರಿಶೀಲನೆ ಹಂತದಲ್ಲಿದೆ. ಕೊರೋನಾ ನಿಯಮಗಳು ಇನ್ನೂ ಜಾರಿಯಲ್ಲಿರೋದರಿಂದ ಮಾರ್ಗಸೂಚಿಗಳನ್ನು ಎಲ್ಲರು ಕಡ್ಡಾಯವಾಗಿ ಪಾಲನೆ ಮಾಡಬೇಕು. ಬಂದೊಬಸ್ತ್, ಮಾರ್ಗ ಬದಲಾವಣೆ ಬಗ್ಗೆ ಹಿರಿಯ ಅಧಿಕಾರಿಗಳು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
Advertisement
"Farmer is the backbone of our Nation
Let us raise our voice to support our Nation"#RajBhavanChalo pic.twitter.com/V8sy0KCY0m
— Siddaramaiah (@siddaramaiah) January 19, 2021
Advertisement
ಸಾವಿರಾರು ಜನರು ಭಾಗವಹಿಸೋದರಿಂದ ಮೆಜೆಸ್ಟಿಕ್, ವಿಧಾನಸೌಧಸುತ್ತಮುತ್ತಲಿನ ರಸ್ತೆಗಳು ಸ್ತಬ್ಧ ಆಗೋ ಸಾಧ್ಯತೆಗಳು ಹೆಚ್ಚಾಗಿದೆ. 10 ಗಂಟೆಯ ನಂತರ ರಸ್ತೆಗಿಳಿದ್ರೆ ಟ್ರಾಫಿಕ್ ನಲ್ಲಿ ಲಾಕ್ ಅಗೋದು ಪಕ್ಕಾ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ಸಂಬಂಧಿತ ಕರಾಳ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ಜ.20ರಂದು ಕಾಂಗ್ರೆಸ್ 'ರಾಜಭವನ ಚಲೋ' ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ರೈತ ಈ ದೇಶದ ಬೆನ್ನೆಲುಬು. ಆತನ ರಕ್ಷಣೆ ನಮ್ಮ ಹೊಣೆ. ಬನ್ನಿ ರೈತರ ಬೆನ್ನಿಗೆ ನಿಲ್ಲೋಣ, ಅನ್ನದಾತನ ಋಣ ತೀರಿಸೋಣ.#RajBhavanChalo pic.twitter.com/D0pNUmwryT
— Karnataka Congress (@INCKarnataka) January 19, 2021