ಉಡುಪಿ: ದೇಶಾದ್ಯಂತ ಕಾರ್ಮಿಕ ಸಂಘಟನೆಗಳು 13 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದ್ದು, ಅದಕ್ಕೆ ಬೆಂಬಲ ಸೂಚಿಸಿ ಉಡುಪಿಯಲ್ಲಿ ಕಾರ್ಮಿಕ ಸಂಘಟನೆಗಳಾದ ಸಿಐಟಿಯು, ಎಐಕೆಎಸ್ ಜಂಟಿಯಾಗಿ ಇವತ್ತು ಪ್ರತಿಭಟನೆ ನಡೆಸಿತು.
ಉಡುಪಿಯ ಬನ್ನಂಜೆಯಲ್ಲಿರುವ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಸಂಹಿತೆಗಳು ಹಾಗೂ ಜನವಿರೋಧಿ ಕೃಷಿ ಕಾನೂನುಗಳು ಮತ್ತು ವಿದ್ಯುತ್ ತಿದ್ದುಪಡಿಯನ್ನು ರದ್ದುಪಡಿಸಬೇಕು. ರೈತರ ಎಲ್ಲ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಲಾಯ್ತು.
Advertisement
Advertisement
ರಾಜ್ಯ ಸರ್ಕಾರ ಶ್ರೀಮಂತರಿಗೆ ಅನುಕೂಲವಾಗುವಂತೆ ಭೂ ಸುಧಾರಣೆ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂಬ ಮುಖ್ಯ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳು ಮುಂದಿಟ್ಟಿವೆ. ಕಾರ್ಮಿಕರ ಪರವಾಗಿ ನಮ್ಮ ಸಂಘಟನೆ ಪ್ರತಿಭಟನೆ ಮಾಡುತ್ತಿದೆ. ಅಧಿಕಾರದಲ್ಲಿರುವ ನೀವು ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣಬೇಕು. ಕಾರ್ಮಿಕರ ಹಿತ ಕಾಪಾಡುವುದು ಸರ್ಕಾರದ ಪ್ರಮುಖ ಉದ್ದೇಶ ಆಗಬೇಕು ಎಂದು ಒತ್ತಾಯಿಸಲಾಯಿತು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಇದನ್ನೂ ಓದಿ: ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ – ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವು