ನವದೆಹಲಿ: ಬಜೆಟ್ನಲ್ಲಿ ಪ್ರಸ್ತಾಪಗೊಂಡಿರುವ ಸೆಸ್ನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಆಗುವುದಿಲ್ಲ, ಗ್ರಾಹಕರಿಗೆ ಹೊರೆ ಆಗುವುದಿಲ್ಲ ಈಗ ಇರುವಂತೆ ದರಗಳು ಇರಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
Advertisement
ಅಡಿಷನಲ್ ಕಸ್ಟಮ್ ಡ್ಯೂಟಿ ಮತ್ತು ಅಬಕಾರಿ ಸುಂಕವನ್ನು ಸಮ ಪ್ರಮಾಣದಲ್ಲಿ ಇಳಿಕೆ ಮಾಡಲಾಗಿದೆ. ಹೀಗಾಗಿ ತೈಲ ದರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ.
Advertisement
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಹಾಕುವುದಾಗಿ ತಿಳಿಸಿದ್ದಾರೆ.
Advertisement
Advertisement
ಒಂದು ಲೀಟರ್ ಪೆಟ್ರೋಲ್ ಮೇಲೆ 2.5 ರೂ., ಡೀಸೆಲ್ ಮೇಲೆ 4 ರೂ. ಸೆಸ್ ವಿಧಿಸುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಇದನ್ನು ಓದಿ: ಪೆಟ್ರೋಲ್ ಮೇಲೆ 2.5 ರೂ, ಡೀಸೆಲ್ ಮೇಲೆ 4 ರೂ. ಸೆಸ್
ಪೆಟ್ರೋಲ್ ಮತ್ತು ಡೀಸೆಲ್ಗಳು ಜಿಎಸ್ಟಿ ವ್ಯಾಪ್ತಿಯಲ್ಲಿ ಬರುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚು ಆದಾಯವನ್ನು ತರುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ವಿಧಿಸುತ್ತದೆ.