ನವದೆಹಲಿ: ವಿಶ್ವವಿಖ್ಯಾತ ಕೆಆರ್ಎಸ್ ಅಣೆಕಟ್ಟೆಯ ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಸಂಸದೆ ಸುಮಲತಾ ಅಂಬರೀಶ್ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
Advertisement
ಮಂಗಳವಾರ ದೆಹಲಿಯಲ್ಲಿ ಭೇಟಿ ಮಾಡಿರುವ ಸಂಸದೆ, ಡ್ಯಾಂ ಸುತ್ತಮುತ್ತಲ ಪ್ರದೇಶದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅತಿರೇಕದ ಅಕ್ರಮ ಗಣಿಗಾರಿಕೆಯಿಂದ ಸಮಸ್ಯೆಯಾಗುತ್ತಿದೆ. ಗಣಿಗಾರಿಕೆಯಿಂದ ಡ್ಯಾಂ ಮೇಲಾಗುತ್ತಿರುವ ಪರಿಣಾಮಗಳು ಹಾಗೂ ಮುಂದೆ ಸಂಭವಿಸಬಹುದಾದ ಅಪಾಯ ಕುರಿತ ಅಂಶಗಳನ್ನು ಸಚಿವರಿಗೆ ತಿಳಿಸಿದ್ದಾರೆ.
Advertisement
ಗಣಿಗಾರಿಕೆ ಕುರಿತು ತನಿಖೆ ನಡೆಸಲು ಮತ್ತು ಪರಿಹರಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
Advertisement
ಇಂದು ಸನ್ಮಾನ್ಯ ಕೇಂದ್ರ ಜಲ ಶಕ್ತಿ ಮಂತ್ರಿಗಳಾದ ಶ್ರೀ.ಗಜೇಂದ್ರ ಸಿಂಗ್ ಶೇಖಾವತ್ @gssjodhpur ಅವರನ್ನು ಭೇಟಿಯಾಗಿ, ಕೆ.ಆರ್.ಎಸ್ ಅಣೆಕಟ್ಟೆಗೆ ಅಕ್ರಮ ಗಣಿಗಾರಿಕೆಯಿಂದ ಬಂದೊದಗಿರುವ ಅಪಾಯವನ್ನು ಅವರ ಗಮನಕ್ಕೆ ತಂದು, ಈ ವಿಚಾರವಾಗಿ ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದೆ. #StopIllegalMining #savekrsdam pic.twitter.com/2uxbLzL17Y
— Sumalatha Ambareesh ???????? ಸುಮಲತಾ ಅಂಬರೀಶ್ (@sumalathaA) July 20, 2021
Advertisement
ಈ ಕುರಿತು ಟ್ವೀಟ್ ಸಹ ಮಾಡಿರುವ ಅವರು, ಇಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ, ಕೆಆರ್ಎಸ್ ಅಣೆಕಟ್ಟೆಗೆ ಅಕ್ರಮ ಗಣಿಗಾರಿಕೆಯಿಂದ ಬಂದೊದಗಿರುವ ಅಪಾಯವನ್ನು ಅವರ ಗಮನಕ್ಕೆ ತಂದು, ಈ ವಿಚಾರವಾಗಿ ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದೆ ಎಂದು ಬರೆದುಕೊಂಡಿದ್ದಾರೆ.