-ಎರಡೂ ಸಮುದಾಯದವರು ಸಂಯಮದಿಂದ ವರ್ತಿಸಿ
ಬೆಂಗಳೂರು: ಕೆಜಿ ಹಳ್ಳಿಯ ಗಲಾಟೆಗೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಂ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ. ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್ಗೆ ತಿಳಿಸಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ದುಷ್ಕರ್ಮಿಗಳ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆ – ಭಯದಿಂದ ಬಾತ್ರೂಮಿನಲ್ಲಿ 3 ಗಂಟೆ ಬಚ್ಚಿಟ್ಟುಕೊಂಡಿದ್ದ ಕುಟುಂಬ
Advertisement
ಇಂತಹ ಕೋಮು ಗಲಭೆಗಳಲ್ಲಿ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ.#Kavalbyrasandra
3/4
— Siddaramaiah (@siddaramaiah) August 12, 2020
Advertisement
ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ. ಇಂತಹ ಕೋಮು ಗಲಭೆಗಳಲ್ಲಿ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ. ಇದನ್ನೂ ಓದಿ: ಬೆಂಕಿ ಹಚ್ಚೋದು ನಮ್ಮ ಸಂಸ್ಕೃತಿಯಲ್ಲ, ನೆಲದ ಕಾನೂನೇ ಅಂತಿಮ: ಖಾದರ್
Advertisement
ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ
ಬೆಂಗಳೂರು ಪೊಲೀಸ್ ಕಮಿಷನರ್ಗೆ ತಿಳಿಸಿದ್ದೇನೆ.
ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ
ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ. #Kavalbyrasandra
2/4
— Siddaramaiah (@siddaramaiah) August 12, 2020
Advertisement
ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ ಕಳೆದುಕೊಳ್ಳಬಾರದು. ಇಂತಹ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸಲ್ಲ: ಸಿಎಂ ಬಿಎಸ್ವೈ
ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ.
ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ.#Kavalbyrasandra
1/4
— Siddaramaiah (@siddaramaiah) August 12, 2020