ಬೆಳಗಾವಿ: ಕೆಪಿಎಸ್ಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಮತ್ತೋರ್ವ ಆರೋಪಿಯನ್ನು ಗೋಕಾಕ್ನಲ್ಲಿ ಬಂಧಿಸಲಾಗಿದೆ.
ಬಂಧಿತ ಆರೋಪಿ ಸಂಗನಕೇರಿ ಗ್ರಾಮದ ಶಿವಲಿಂಗ ಪಾಟೀಲ್ ಆಗಿದ್ದು, ಈತ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಜ್ಞಾನದೀಪ ಕೋಚಿಂಗ್ ಸೆಂಟರ್ ನಡೆಸುತ್ತಿದ್ದನು. ಆದರೆ ಎರಡು ವರ್ಷದ ಹಿಂದೆ ಕೋಚಿಂಗ್ ಸೆಂಟರ್ ಕ್ಲೋಸ್ ಮಾಡಿದ್ದನು. ಈ ಮುನ್ನ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಶಿವಲಿಂಗ ಪಾಟೀಲ್, ಎರಡು ವರ್ಷಗಳಿಂದ ತಲೆಮರೆಸಿಕೊಂಡು ಅಡ್ಡಾಡುತ್ತಿದ್ದನು.
Advertisement
Advertisement
ಕೆಪಿಎಸ್ಸಿ ಪ್ರಶ್ನೆಪತ್ರಿಕೆ ಕೀ ಆನ್ಸರ್ ಸೋರಿಕೆ ಪ್ರಕರಣದಲ್ಲಿ ಶಿವಲಿಂಗ ಪಾಟೀಲ್ ಕೂಡ ಭಾಗಿಯಾಗಿರುವುದಾಗಿ ಬೆಂಗಳೂರು ಸಿಸಿಬಿ ಪೊಲೀಸರು, ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಎರಡು ದಿನಗಳ ಹಿಂದೆ ಶಿವಲಿಂಗ ಪಾಟೀಲ್ ಬಂಧಿಸಿದ್ದಾರೆ. ಇದೀಗ ಆರೋಪಿ ಶಿವಲಿಂಗ ಪಾಟೀಲ್ನನ್ನು ಬೆಂಗಳೂರು ಸಿಸಿಬಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.