ಬೆಂಗಳೂರು: ಉಪ ಚುನಾವಣೆ ನಡೆದ ಎರಡೇ ದಿನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. 2 ಕ್ಷೇತ್ರಗಳ ಫಲಿತಾಂಶ ಬರೋದಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇರುವಂತೆ ಕೆಪಿಸಿಸಿ ಅಧ್ಯಕ್ಷರ ದಿಢೀರ್ ದೆಹಲಿ ಪ್ರವಾಸ ಅಚ್ಚರಿ ಮೂಡಿಸಿದೆ.
Advertisement
ಉಪ ಚುನಾವಣೆಯ ಹೊತ್ತಲ್ಲಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ಹೇಳಿಕೆಗಳ ಬಗ್ಗೆ ಹೈಕಮಾಂಡ್ಗೆ ದೂರು ನೀಡುವ ನಿರೀಕ್ಷೆ ಇದೆ. ಇದರಿಂದ ಪಕ್ಷದಲ್ಲಿ ಸಮನ್ವಯತೆ ಇಲ್ಲ ಎಂದು ಬಿಂಬಿತವಾಗಿದೆ. ಪಕ್ಷದೊಳಗೆ ಭಿನ್ನಾಭಿಪ್ರಾಯ ತೀವ್ರಗೊಳ್ಳುವುದಕ್ಕೂ ಕಾರಣ ಆಗಬಹುದು. ಇದನ್ನು ಓದಿ: ಸಿದ್ದರಾಮಯ್ಯ ಸಿಎಂ ಆಗಬೇಕು ಅನ್ನೋದು ಜನರ ಅಭಿಪ್ರಾಯ: ಜಮೀರ್ ಅಹ್ಮದ್
Advertisement
Advertisement
ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಗಾದಿ ಬಗ್ಗೆ ಈಗ ಬಹಿರಂಗ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಮತ್ತು ಮತ್ತವರ ಕಡೆಯವರಿಗೆ ಸೂಚಿಸಿ ಎಂದು ಹೈಕಮಾಂಡ್ಗೆ ಡಿಕೆಶಿ ಮನವಿ ಮಾಡುವ ನಿರೀಕ್ಷೆ ಇದೆ.
Advertisement