ಹಾವೇರಿ: ಮಾಜಿ ಸಚಿವ ಹಾಲಿ ಶಾಸಕರಾಗಿದ್ದ ಸಿ.ಎಂ ಉದಾಸಿ ನಿಧನದಿಂದ ತೆರವಾಗಿರುಗಿ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಸದ್ಯದಲ್ಲಿ ಉಪ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಫೈಟ್ ತಾರಕ್ಕಕ್ಕೆ ಏರಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷರ ಸಮ್ಮುಖದಲ್ಲಿ ಮನೋಹರ್ ಹಾಗೂ ಶ್ರೀನಿವಾಸ ಮಾನೆ ಬೆಂಬಲಿಗರು ಕೈ, ಕೈ ಮಿಲಾಯಿಸಿದ್ದ ಘಟನೆ ಹಾವೇರಿಯಲ್ಲಿ ನಡೆದಿದೆ.
Advertisement
ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ನಡೆಯುವ ಪ್ರತಿಭಟನೆಯ ಮುಂದಾಳತ್ವ ವಹಿಸಲು ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಮ್ಮುಖದಲ್ಲಿ ಹಾನಗಲ್ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮ ನಾಯಕರಿಗೆ ಟಿಕೆಟ್ ನೀಡುವಂತೆ ವರಿಷ್ಠ ಸಲೀಂ ಅಹ್ಮದ್ ಅವರಿಗೆ ಮನವರಿಕೆ ಮಾಡಿಕೊಳ್ಳಲು ಮುಂದಾದ ಸಮಯದಲ್ಲಿ ಆರೋಪ-ಪ್ರತ್ಯಾರೋಪ ತಾರಕಕ್ಕೆ ಏರಿ ಹೊಡೆದಾಟ ಆರಂಭವಾಗಿದೆ.
Advertisement
Advertisement
ಕಾಂಗ್ರೆಸ್ ಆಂತರಿಕ ಸಭೆಯಲ್ಲಿ ಹಾನಗಲ್ ತಾಲೂಕಿನಲ್ಲಿ ನಡೆಯುವ ಉಪಚುನಾವಣೆಯ ಟಿಕೆಟ್ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಉಭಯ ನಾಯಕರಗಳ ಬೆಂಬಲಿಗರು ತಮ್ಮ ತಮ್ಮ ನಾಯಕರ ಬೆಂಬಲಿಸಿ ಮಾತಿನ ಚಕಮಕಿ ನಡೆಯಿತು. ಈ ಸಮಯದಲ್ಲಿ ಮಧ್ಯ ಪ್ರವೇಶ ಮಾಡಿದ ಜಿಲ್ಲಾಮಟ್ಟದ ನಾಯಕರು ಎರಡು ಗುಂಪಿನ ಕಾರ್ಯಕರ್ತರನ್ನು ಹೊರ ಕಳುಹಿಸಿದರು. ಬಳಿಕ ಮಾನೆ ಬೆಂಬಲಿಗರು ಖಾಸಗಿ ಹೋಟೆಲ್ ನಲ್ಲಿ ಉಪಹಾರ ಸೇವಿಸಿ ಸಭೆ ನಡೆಸಿದರು. ಮನೋಹರ ಬೆಂಬಗಲಿಗರು ಪ್ರವಾಸಿ ಮಂದಿರದಲ್ಲಿ ಪ್ರತ್ಯೇಕ ಸಭೆ ನಡೆಸಿದರು. ಇದನ್ನೂ ಓದಿ: ಉಪಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್
Advertisement
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ಸಮ್ಮುಖದಲ್ಲಿ ಉಭಯ ನಾಯಕರ ತಲಾ ಹತ್ತು- ಹತ್ತು ಜನರು ಅಭಿಪ್ರಾಯ ಸಂಗ್ರಹಿಸಿದರು. ಚುನಾವಣೆ ಆಯೋಗ ಇನ್ನೂ ಚುನಾವಣೆ ಘೋಷಣೆ ಮಾಡಿಲ್ಲ. ಅದಾಗಲೇ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್ ತಾರಕ್ಕಕ್ಕೆ ಏರಿದೆ.