– ಕೊರೊನಾ ಸಂದರ್ಭದಲ್ಲಿ ಕೇಂದ್ರದೊಂದಿಗೆ ಕಾಂಗ್ರೆಸ್ ನಿಲ್ಲುತ್ತದೆ
– ಪ್ರತಿ ಬಡ ಕುಟುಂಬಕ್ಕೆ 6 ಸಾವಿರ ರೂ. ನೀಡಿ
– ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಿ
ನವದೆಹಲಿ: ದೇಶದಲ್ಲಿ ಕೊರೊನಾ ತಾಂಡವಾಡುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 4 ಲಕ್ಷಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಆಕ್ಸಿಜನ್ಗಾಗಿ ಜನ ಪರದಾಡುತ್ತಿದ್ದಾರೆ. ಹೀಗಿರುವಾಗಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚರಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಈ ಕುರಿತು ವೀಡಿಯೋ ಸಂದೇಶ ನೀಡಿರುವ ಅವರು, ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚರಗೊಳ್ಳಬೇಕಿದೆ. ಅಲ್ಲದೆ ತಮ್ಮ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ಪಾಲಿಸಬೇಕಿದೆ. ಕೊರೊನಾ ಹರಡುವಿಕೆಯನ್ನು ತಗ್ಗಿಸಲು ರಾಷ್ಟ್ರೀಯ ನೀತಿ ರಚಿಸುವ ಅಗತ್ಯವಿದ್ದು, ರಾಜಕೀಯ ಒಮ್ಮತವನ್ನು ಸಾಧಿಸುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
Advertisement
कोरोना महामारी के इस चुनौतीपूर्ण समय में आपके व आपके परिवार की सुरक्षा और अच्छे स्वास्थ्य की कामना करती हूं। वह लाखों परिवार जिन्होंने अपने परिजनों को खोया है, उनके प्रति दिल से अपनी संवेदना व्यक्त करती हूं।
– कांग्रेस अध्यक्षा, श्रीमती सोनिया गांधी#COVID19India pic.twitter.com/btmCeG8K6B
— Congress (@INCIndia) May 1, 2021
Advertisement
ಕೊರೊನಾ ವಿರುದ್ಧ ಹೋರಾಡಲು ರಾಷ್ಟ್ರೀಯ ನೀತಿಯನ್ನು ರೂಪಿಸಿ, ಈ ಬಗ್ಗೆ ರಾಜಕೀಯ ಒಮ್ಮತವನ್ನು ಪಡೆಯಿರಿ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚರಗೊಳ್ಳಲು ಇದು ಸಕಾಲವಾಗಿದೆ ಎಂದು ಅವರು ಮನವಿ ಮಾಡಿದ್ದಾರೆ. ಕೊರೊನಾ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕು. ದೇಶದಲ್ಲಿ ಲಸಿಕೆ ಪ್ರಕ್ರಿಯೆಯನ್ನು ಇನ್ನೂ ವೇಗಗೊಳಿಸಬೇಕು. ಲೈಸೆನ್ಸ್ ನೀಡಿ ಹೆಚ್ಚುವರಿ ಉತ್ಪಾದನಾ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.
Advertisement
ಅಲ್ಲದೆ ಸದ್ಯದ ಕಠಿಣ ಪರಿಸ್ಥಿತಿ ಎದುರಿಸಲು ಪ್ರತಿ ಬಡ ಕುಟುಂಬಕ್ಕೆ ಕೇಂದ್ರ ಸರ್ಕಾರ 6 ಸಾವಿರ ರೂ.ಗಳನ್ನು ಅವರ ಖಾತೆಗಳಿಗೆ ಜಮೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
Advertisement
ಕೊರೊನಾ ಪರೀಕ್ಷೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಬೇಕು. ಜೀವ ಉಳಿಸಲು ಅಗತ್ಯವಿರುವ ಔಷಧಿ ಬ್ಲಾಕ್ ಮಾರ್ಕೆಟ್ನಲ್ಲಿ ಮಾರಾಟವಾಗುವುದನ್ನು ತಡೆಯಬೇಕು. ಕೊರೊನಾ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರದ ಜೊತೆ ಕಾಂಗ್ರೆಸ್ ಯಾವಾಗಲೂ ಇರುತ್ತದೆ. ಇಂತಹ ಪರೀಕ್ಷೆ ಕಾಲದಲ್ಲಿ ಪ್ರತಿಯೊಬ್ಬ ಭಾರತೀಯನು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ
ಭಾರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಒಂದೇ ದಿನ 4 ಲಕ್ಷಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 4,01,993 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ಮೂಲಕ ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 3,523 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಇದುವರೆಗೆ 2,11,853 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.
ಸದ್ಯ ದೇಶದಲ್ಲಿ 32,68,710 ಸಕ್ರಿಯ ಪ್ರಕರಣಗಳಿವೆ. 1,56,84,406 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 15,49,89,635 ಮಂದಿ ಮುಂಜಾಗ್ರತಾ ಕ್ರಮವಾಗಿ ವಾಕ್ಸಿನ್ ಪಡೆದುಕೊಂಡಿದ್ದಾರೆ.