ನವದೆಹಲಿ: ಕೇಂದ್ರ ಸಚಿವ ರಾಮ್ವಿಲಾಸ್ ಪಾಸ್ವಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿವರು ಶ್ವಾಸಕೋಶ ಸಮಸ್ಯೆ ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಫೋರ್ಟಿಸ್ ಎಸ್ಕೋರ್ಟ್ಸ್ ಹಾರ್ಟ್ ಇನ್ಸ್ ಸ್ಟಿಟ್ಯೂಟ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿ ಸುಧಾರಿಸಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
Advertisement
Advertisement
ಪಾಸ್ವಾನ್ ಅವರಿಗೆ ಈ ಮೊದಲೇ ಹೃದಯ ಸಮಸ್ಯೆ ಕಾಣಿಸಿಕೊಂಡಿದ್ದು, 2017ರಲ್ಲಿ ಲಂಡನ್ ನಲ್ಲಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸಚಿವರು ಹಲವು ಕಾಯಿಲೆಗಳಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಅತ್ಯಂತ ಸೂಕ್ಷ್ಮವಾಗಿ ಗಮನಿಸಿ, ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
Advertisement
Ram Vilas Paswan @irvpaswan admitted to Escorts Heart institute, due to pre-existing heart condition.#ramvilaspaswan #breakingnews #Delhi pic.twitter.com/gertmuhtZ3
— Piyush Goyal (@goyalpp) August 24, 2020