ಬೆಂಗಳೂರು: ಕೇಂದ್ರ ಸಚಿವ ಸುರೇಶ್ ಅಂಗಡಿ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
Advertisement
ಈ ಕುರಿತು ಇಬ್ಬರೂ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಸುರೇಶ್ ಅಂಗಡಿಯವರು ಟ್ವೀಟ್ ಮಾಡಿ, ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
Advertisement
ನಾನು #Covid19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ.
ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ.@PMOIndia
— Suresh Angadi (@SureshAngadi_) September 11, 2020
Advertisement
ಕೇಂದ್ರ ಸಚಿವ ಸುರೇಶ್ ಅಂಗಡಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಪ ಪ್ರಮಾಣದ ಗುಣಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಈ ವೇಳೆ ಕೊರೊನಾ ಪಾಸಿಟಿವ್ ಇರುವುದು ಧೃಢವಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Advertisement
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ. pic.twitter.com/BseJ4lcy5K
— S R Vishwanath (@SRVishwanathBJP) September 11, 2020
ಅದೇ ರೀತಿ ಎಸ್.ಆರ್.ವಿಶ್ವನಾಥ್ ಟ್ವೀಟ್ ಮಾಡಿ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗ ಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.