ಹಾವೇರಿ: ಸುಮಾರು ಇಪ್ಪತ್ತು ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಗ್ರಾಮ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಯಲವಿಗಿ ಗ್ರಾಮಕ್ಕೆ ಆಗಮಿಸಿದ ವೀರಯೋಧ ನಾಗರಾಜ ನಾಗಪ್ಪನವರ್ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ, ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
Advertisement
ನಾಗರಾಜ ನಾಗಪ್ಪನವರ್ ಅವರು ತಮ್ಮ 18 ವರ್ಷದ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ್ದು,ಬಳಿಕ ಮತ್ತೆ ಎರಡು ವರ್ಷ ಹೆಚ್ಚಿನ ಸೇವೆಯನ್ನು ಸಲ್ಲಿಸಿ ಸ್ವಗ್ರಾಮಕ್ಕೆ ಆಗಮಿಸಿದರು. ಈ ಹಿನ್ನೆಲೆಯಲ್ಲಿ ಯಲವಿಗಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಕೇಕ್ ಕತ್ತರಿಸಿ ನಿವೃತ್ತ ಯೋಧನಿಗೆ ವಿಶೇಷ ಗೌರವ ಸಲ್ಲಿಸಿದರು.
Advertisement
Advertisement
ಇದೇ ವೇಳೆ ಮಾತನಾಡಿದ ವೀರಯೋಧ ನಾಗರಾಜ್, ದೇಶ ಸೇವೆ ಮಾಡಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯವಾಗಿದೆ. ಹೆತ್ತ ತಾಯಿಯ ಹಾಗೂ ಭೂಮಿತಾಯಿಯ ಋಣ ತೀರಿಸಲು ಸಿಕ್ಕಿರುವ ಅವಕಾಶವಾಗಿದ್ದು, ನಿಜಕ್ಕೂ ನನಗೆ ನನ್ನ ದೇಶ ಸೇವೆ ಖುಷಿ ತಂದಿದೆ ಎಂದರು.
Advertisement
ಮುಖ್ಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ನಿವೃತ್ತಿ ನಂತರವೂ ಕಾರ್ಯನಿರ್ವಹಿಸಿದ್ದೇನೆ. ನಮ್ಮ ಊರಿನಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಎಲ್ಲೆಡೆಯೂ ಯೋಧರಿಗೆ ಗೌರವ ಸಲ್ಲಿಸುತ್ತಾರೆ. ಇದರಿಂದ ಯೋಧನ ಸೇವೆಗೆ ಸಿಕ್ಕ ಒಂದು ಗೌರವವಾಗಿದೆ ಎಂದು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರಿಗೆ ಧನ್ಯವಾದ ತಿಳಿಸಿದರು.