ತಿರುವನಂತಪುರಂ: ಕೇರಳದಲ್ಲಿ ಮತ್ತೆ ಪಿಣರಾಯ್ ವಿಜಯನ್ ಅಧಿಕಾರಕ್ಕೆ ಏರುವ ಸಾಧ್ಯತೆ ಹೆಚ್ಚಿದೆ.ಆರಂಭಿಕ ಎಣಿಕೆಗಳಲ್ಲಿ ಎಲ್ಡಿಎಫ್ ಮೈತ್ರಿಕೂಟ ಮುನ್ನಡೆಯಲ್ಲಿದೆ.
ಎಲ್ಡಿಎಫ್ ಮೈತ್ರಿಕೂಟ 78 ರಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ 57 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
Advertisement
Advertisement
ಆರಂಭದಲ್ಲಿ ಬಿಜೆಪಿ ಕೋಯಿಕ್ಕೋಡ್ ದಕ್ಷಿಣ ಮತ್ತು ಕಾಸರಗೋಡಿನಲ್ಲಿ ಮುನ್ನಡೆ ಸಾಧಿಸಿತ್ತು. ಸದ್ಯ ಬಿಜೆಪಿಯಿಂದ ಸ್ಪರ್ಧಿಸಿರುವ ಮೆಟ್ರೋ ಮ್ಯಾನ್ ಶ್ರೀಧರನ್ ಅವರು ಪಾಲಕ್ಕಾಡ್ನಲ್ಲಿ ಮುನ್ನಡೆ ಸಾಧಿಸಿದ್ದಾರೆ. ತ್ರಿಶ್ಯೂರಿನಲ್ಲಿ ಸುರೇಶ್ ಗೋಪಿ ಮುನ್ನಡೆಯಲ್ಲಿದ್ದಾರೆ.
Advertisement
ನೇಮಂನಲ್ಲಿ ಕುಮ್ಮನಂ ರಾಜಶೇಖರ್ ಮುನ್ನಡೆಯಲ್ಲಿದ್ದಾರೆ. 2016ರ ಚುನಾವಣೆಯಲ್ಲಿ ಮೊದಲ ಬಾರಿಗೆ ಇಲ್ಲಿ ಕಮಲ ಅರಳಿತ್ತು. ಮಾಜಿ ಕೇಂದ್ರ ಸಚಿವ ಒ ರಾಜಗೋಪಾಲ್ ಇಲ್ಲಿ ಗೆಲುವು ಸಾಧಿಸಿದ್ದರು.