ಮಡಿಕೇರಿ: ಇಂದಿನಿಂದ ಕೊಡಗು ಅನ್ಲಾಕ್ ಆಗಿದ್ದು, ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ.
ಲಾಕ್ಡೌನ್ ತೆರವುಗೊಳಿಸಿದರೂ ಸೋಂಕು ಕಡಿಮೆಯಾಗದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಮಾತ್ರ ನಿರ್ಬಂಧ ಮುಂದುವರೆಸಲಾಗಿತ್ತು. ಪ್ರವಾಸೋದ್ಯಮವೇ ಮೂಲ ಆದಾಯವಾಗಿರುವ ಕೊಡಗಿನಲ್ಲಿ ಲಾಕ್ಡೌನ್ ನಿಂದಾಗಿ ಸಾಕಷ್ಟು ನಷ್ಟ ಉಂಟಾಗಿದೆ. ಅಲ್ಲದೆ ಜನ ಕೂಡ ಉದ್ಯೋಗ, ಆದಾಯವಿಲ್ಲದೇ ಕಂಗೆಟ್ಟಿದ್ದಾರೆ. ಈ ಹಿನ್ನಲೆ ಇಂದಿನಿಂದ ಕೊಡಗಿನಲ್ಲಿ ಅನ್ಲಾಕ್ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
Advertisement
Advertisement
ಕೊಡಗು ಪ್ರವಾಸ ಕೈಗೊಂಡಿದ್ದ ಸಚಿವರಿಗೆ ಈ ಕುರಿತು ಸಾಕಷ್ಟು ಮನವಿಗಳು ಬಂದ ಹಿನ್ನೆಲೆ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಅನ್ಲಾಕ್ ಮಾರ್ಗಸೂಚಿಯನ್ನು ಕೊಡಗು ಜಿಲ್ಲೆಗೆ ವಿಸ್ತರಣೆ ಮಾಡಲಾಗುತ್ತದೆ. ಆದರೆ ಕೊರೊನಾ ನಿಯಮವಾಳಿಗಳನ್ನು ಪಾಲಿಸುವುದು ಕಡ್ಡಾಯ ಎಂದು ಎಚ್ಚರಿಸಿದ್ದಾರೆ.
Advertisement
ಅನ್ಲಾಕ್ ಕುರಿತು ಶಾಸಕ ಕೆಜಿ ಬೋಪಯ್ಯ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಈಗಿರುವ ಕೋವಿಡ್ ಮಾರ್ಗಸೂಚಿ ಸರಿ ಇದೆ. ಕನಿಷ್ಠ ಜುಲೈ 12ರ ವರೆಗೆ ಲಾಕ್ಡೌನ್ ವಿಸ್ತರಣೆ ಮಾಡುವುದು ಉತ್ತಮ ಎಂದರು.
Advertisement
ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾತನಾಡಿ, ರಾಜ್ಯ ಸರ್ಕಾರದ ಅದೇಶವನ್ನು ಜಿಲ್ಲೆಯಲ್ಲಿ ಅನುಷ್ಠಾನ ಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಜಿಲ್ಲೆಯನ್ನು ಅನ್ಲಾಕ್ ಮಾಡಿದರೆ ಪ್ರವಾಸೋದ್ಯಮ, ರೆಸಾರ್ಟ್, ಹೋಟೆಲ್ ಗಳಿಗೆ ಅನುಕೂಲವಾಗುತ್ತದೆ. ಆದರೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿವೆ ಎಂಬ ಆತಂಕ ಕಾಡುತ್ತಿದೆ.