ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇಂದು ಮತ್ತೆ 6 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ದಾಖಲಾಗಿರುವ 36 ರಲ್ಲಿ 33 ಪ್ರಕರಣಗಳು ಸಕ್ರಿಯವಾಗಿದೆ.
ಬೆಂಗಳೂರಿನ ಪ್ರಯಾಣದ ಇತಿಹಾಸ ಹೊಂದಿರುವ ಗಂಡ, ಹೆಂಡತಿ ಮತ್ತು ಎರಡು ವರ್ಷ ವಯಸ್ಸಿನ ಮಗುವಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇವರು ವಿರಾಜಪೇಟೆ ತಾಲ್ಲೂಕಿನ ಹುಂಡಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ವಾಸ ಮಾಡಿದ್ದರು.
Advertisement
Advertisement
ಪುಣೆಯಿಂದ ಜಿಲ್ಲೆಗೆ ಹಿಂತಿರುಗಿರುವ 24 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಇವರು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ನಿವಾಸಿ ಆಗಿದ್ದಾರೆ. ವಿರಾಜಪೇಟೆ ತಾಲ್ಲೂಕು ಕೊಂಡಂಗೇರಿ ಗ್ರಾಮದ 23 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇವರು ಶಾರ್ಜಾದಿಂದ ಮರಳಿದ್ದರು.
Advertisement
ಸೋಮವಾರಪೇಟೆ ತಾಲೂಕಿನ ಕುಶಾಲನಗರ ಹೋಬಳಿಯ ಹುಲುಸೆ ಗ್ರಾಮದ (46)ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇವರಿಗೆ ಬೆಂಗಳೂರಿನ ಪ್ರಯಾಣದ ಇತಿಹಾಸವಿದೆ. ಎಲ್ಲಾ ಸೋಂಕಿತರನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
Advertisement
ಜಿಲ್ಲೆಯಲ್ಲಿ ಹೊಸದಾಗಿ ಹುಂಡಿ, ನೆಲ್ಲಿಹುದಿಕೇರಿ ಮತ್ತು ಹುಲುಸೆ ಗ್ರಾಮದಲ್ಲಿ ನಿಯಂತ್ರಿತ ಪ್ರದೇಶಗಳನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 36 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 03 ಮೂವರು ಗುಣಮುಖರಾಗಿದ್ದು, ಪ್ರಸ್ತುತ ಒಟ್ಟು 18 ನಿಯಂತ್ರಿತ ಪ್ರದೇಶಗಳಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.