– ವಿವಿಧ ಜಿಲ್ಲೆಗಳಿಗೆ ಸಂಚರಿಸಿರುವ ಸೋಂಕಿತ ವ್ಯಾಪಾರಿ
ಮಡಿಕೇರಿ: ಜಿಲ್ಲೆಯಲ್ಲಿ ಇಷ್ಟು ದಿನ ಕೊರೊನಾ ನಿಯಂತ್ರಣದಲ್ಲಿತ್ತು. ಆದರೆ ಇಂದು ಒಂದೇ ದಿನ 3 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.
ಮುಂಬೈನಿಂದ ಬಂದಿದ್ದ ಇಬ್ಬರಲ್ಲಿ ಹಾಗೂ ಕೊಡಗಿನ ವ್ಯಾಪಾರಿಯೊಬ್ಬರಿಗೆ ಸೋಂಕು ಪತ್ತೆಯಾಗಿದೆ. ಮುಂಬೈನಿಂದ ಬಂದಿದ್ದ ವ್ಯಕ್ತಿಯೊಬ್ಬರು ನೇರವಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪಾಸಿಟಿವ್ ಬಂದಿದೆ. ಮತ್ತೊಬ್ಬರು ಮುಂಬೈನಿಂದ ಬಂದು ಮಂಡ್ಯದಲ್ಲಿ 14 ದಿನ ಕ್ವಾರಂಟೈನ್ ಮುಗಿಸಿ ಬಳಿಕ ಕೊಡಗಿಗೆ ಬಂದಿದ್ದ ಸೋಮವಾರಪೇಟೆ ತಾಲೂಕಿನ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಮಹಿಳೆ ತಾನು ಎಲ್ಲೂ ಓಡಾಡಿಲ್ಲ ಎಂದು ಹೇಳುತ್ತಿದ್ದಾರೆ. ಜಿಲ್ಲಾಡಳಿತ ಮಾತ್ರ ಮಹಿಳೆಯ ಟ್ರಾವೆಲ್ ಹಿಸ್ಟರಿಯಲ್ಲಿ ಕಲೆ ಹಾಕುತ್ತಿದ್ದಾರೆ.
Advertisement
Advertisement
ಸೋಮವಾರಪೇಟೆ ತಾಲೂಕಿನ ಶಿರಂಗಾಲದ ವ್ಯಾಪಾರಿಗೆ ಕೊರೊನಾ ಪಾಸಿಟಿವ್ ಬಂದಿರುವುದು ಜಿಲ್ಲೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. 35 ವರ್ಷದ ವ್ಯಾಪಾರಿ ಬೆಂಗಳೂರು, ಅಲ್ಲಿಂದ ಗದಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಹೋಗಿ ಬಂದಿದ್ದಾರೆ. ಅಷ್ಟೇ ಅಲ್ಲದೆ ಜಿಲ್ಲೆಯಲ್ಲೂ ಸಾಕಷ್ಟು ಕಡೆ ಸಂಚರಿಸಿದ್ದಾರೆ. ಹೀಗಾಗಿ ಜಿಲ್ಲೆಯ ಜನ ತೀವ್ರ ಆತಂಕಗೊಂಡಿದ್ದಾರೆ. ವ್ಯಕ್ತಿ ವಾಸವಾಗಿದ್ದ 120 ಕುಟುಂಬಗಳಿರುವ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ.
Advertisement
ಗ್ರಾಮಕ್ಕೆ ಕೊಡಗು ಡಿಎಚ್ಓ ಮೋಹನ್ ಮತ್ತು ಸೋಮವಾರಪೇಟೆ ತಹಶೀಲ್ದಾರ್ ಗೋವಿಂದ್ ರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಗ್ರಾಮದ ಎಲ್ಲರನ್ನೂ ಆರೋಗ್ಯ ತಪಾಸಣೆಗೆ ಒಳಪಡಿಸುತ್ತಿದ್ದಾರೆ.