– ಉಳಿದ ದಿನ ಪೂರ್ತಿ ಬಂದ್
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳಿಗೆ ಜಿಲ್ಲಾಡಳಿತ ಮುಂದಾಗಿದೆ.
ಇನ್ನೂ ಮುಂದೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಮಾತ್ರ ಜಿಲ್ಲೆಯಾದ್ಯಂತ ಬೆಳಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ದಿನಸಿ, ಹಣ್ಣು-ತರಕಾರಿ, ಮಾಂಸದ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಹಾಗೂ ಉಳಿದ ದಿನ ಅಂಗಡಿಗಳನ್ನು ತೆರೆದು ವಹಿವಾಟು ನಡೆಸಲು ಅವಕಾಶ ಇರುವುದಿಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಔಷಧಿ ಅಂಗಡಿಗಳು, ಪೆಟ್ರೋಲ್ ಬಂಕ್ಗಳಿಗೆ ಬಂದ್ ಅನ್ವಯಿಸುವುದಿಲ್ಲ. ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಪತ್ರಿಕೆ ವಿತರಣೆಗೆ ಪ್ರತಿನಿತ್ಯ ಬೆಳಗ್ಗೆ 6 ರಿಂದ 10 ಗಂಟೆವರೆಗೆ ವಹಿವಾಟಿಗೆ ಅವಕಾಶ ನೀಡಲಾಗಿದೆ. ಬೆಂಗಳೂರು-ಮೈಸೂರು ಕೇರಳದಿಂದ ಬಂದವರಿಂದ ಕೊಡಗು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅಭಿಪ್ರಾಯಪಟ್ಟ ಜಿಲ್ಲಾಧಿಕಾರಿ, ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯ ಪಡೆಗಳು ಹೊರ ಊರುಗಳಿಂದ ಬಂದವರು ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ಸೋಂಕು ತಡೆಯಲು ಪ್ರತಿಯೊಬ್ಬರೂ ಜಿಲ್ಲಾ ಆಡಳಿತದೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.