ಮಡಿಕೇರಿ: ಕೊಡಗಿನ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆಗಳನ್ನು ಎದುರಿಸಲು ಈಗಾಗಲೇ ಚೆಸ್ಕಾಂ ಇಲಾಖೆ ಸನ್ನದ್ಧವಾಗಿದೆ ಎಂದು ಚೆಸ್ಕಾಂ ಕಾರ್ಯನಿರ್ವಹಕ ಎಂಜಿನಿಯರ್.ಬಿ.ಸೋಮಶೇಖರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.
ಇಂದು ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆಗಾಲದಲ್ಲಿ ವಿಪರೀತ ಗಾಳಿ-ಮಳೆ ಆಗುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ಇಲಾಖೆ ಸನ್ನದ್ಧವಾಗಿದೆ. ವಿದ್ಯುತ್ ಇಲಾಖೆ ಪ್ರತೀ ಮಳೆಗಾಲವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ. 2018ರಿಂದ ಜಿಲ್ಲೆಯಲ್ಲಿ ಪ್ರವಾಹದ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ ಎಂದರು.
Advertisement
Advertisement
ಇಂತಹ ಸನ್ನಿವೇಶವನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಸಿಬ್ಬಂದಿ ರೆಡಿಯಾಗಿದ್ದಾರೆ. ಈಗಾಗಲೇ ನಿಗದಿಪಡಿಸಿರುವ ಸ್ಥಳಗಳಲ್ಲಿ ವಿದ್ಯುತ್ ಕಂಬಗಳನ್ನು ಸಂಗ್ರಹಿಸಿದ್ದೇವೆ. ಮಳೆಗಾಲದಲ್ಲಿ ಅಧಿಕ ಕೆಲಸ ಇರುವುದರಿಂದ ಅಗತ್ಯವಿರುವ ಸಿಬ್ಬಂದಿಯ ಜೊತೆಗೆ 150 ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲು ಟೆಂಡರ್ ಕರೆಯಲಾಗಿದೆ. ಸಾಮಾನ್ಯವಾಗಿ 5 ವಾಹನಗಳನ್ನು ಬಳಸುತ್ತಿದ್ದ ಸಿಬ್ಬಂದಿ ಈ ಸಂದರ್ಭದಲ್ಲಿ 20 ವಾಹನಗಳನ್ನು ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.
Advertisement
Advertisement
ಸಾಮಾನ್ಯವಾಗಿ ಅತಿ ಹೆಚ್ಚು ಮಳೆಯಾಗುವ ಪ್ರದೇಶಗಳದ ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ, ಸೂರ್ಲಬ್ಬಿ, ಮಾದಾಪುರ, ಮಡಿಕೇರಿ ತಾಲೂಕಿನ ಭಾಗಮಂಡಲ ಹಾಗೂ ಪಾಲಿಬೆಟ್ಟ ಭಾಗಗಳಲ್ಲಿ ಹೆಚ್ಚಿನ ಸಮಸ್ಯೆಗಳು ಕಂಡುಬರುತ್ತವೆ. ಟ್ರಾನ್ಸ್ ಫಾರ್ಮರ್ನಿಂದ ವಿದ್ಯುತ್ ಲೈನ್ಗಳು 50 ರಿಂದ 60 ಕಿ.ಮೀಟರ್ ದೂರಕ್ಕೆ ಸಂಪರ್ಕ ಕಲ್ಪಿಸಿರುವುದರಿಂದ ಸಮಸ್ಯೆಗಳು ಎದುರಾಗುತ್ತವೆ ಎಂದರು.