ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರು ಮಳೆ ಬಿರುಸು ಪಡೆದಿದೆ. ಅದರಲ್ಲೂ ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ, ಕುಟ್ಟ, ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ.
ಬಿರುನಾಣಿ ಗ್ರಾ.ಪಂ.ವ್ಯಾಪ್ತಿಯ ಬಿರುನಾಣಿ-ನಾಟ್ ಕುಂದ್ ರಸ್ತೆ ಮೇಲೆ ನದಿ ತುಂಬಿ ಹರಿಯುತ್ತಿದ್ದು, ಗ್ರಾಮಕ್ಕೆ ಸಂಪರ್ಕ ಮಾಡುವ ಸೇತುವೆ ಮೇಲೆ 3 ಅಡಿ ಎತ್ತರ ನೀರು ಹರಿಯುತ್ತಿದೆ. ಇದರಿಂದ ಗ್ರಾಮಕ್ಕೆ ಸಂಪರ್ಕ ಕಟ್ ಆಗಿದೆ.
Advertisement
Advertisement
ನಾಟ್ ಕುಂದ್ ಸುತ್ತ ಬ್ರಹ್ಮಗಿರಿ ಅರಣ್ಯ ಸುತ್ತುವರಿದಿದ್ದು, ಈಗ ಏಕೈಕ ರಸ್ತೆ ಮಾರ್ಗ ಕಡಿತವಾಗಿದೆ. ಕಳೆದ ವರ್ಷ ಇದೇ ಪ್ರದೇಶಕ್ಕೆ ಸಂಪರ್ಕ ಕಲ್ಪಿಸಲು ನಿರ್ಮಿಸಿದ್ದ ಕಬ್ಬಿಣದ ತೂಗು ಸೇತುವೆ ಪ್ರವಾಹಕ್ಕೆ ಕೊಚ್ಚಿ ಹೋಗಿತ್ತು. ಈ ಪ್ರದೇಶದಲ್ಲಿ ಸುಮಾರು 12 ಕುಟುಂಬವಿದ್ದು, ಸಂಪರ್ಕ ಕಡಿತದಿಂದ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈಗ ಇರುವ ಸೇತುವೆಯನ್ನು 10 ಅಡಿ ಎತ್ತರವಾಗಿ ನಿರ್ಮಿಸಿದರೆ, ಮಳೆಗೆ ಸೇತುವೆ ಮುಳುಗುವುದನ್ನು ತಡೆಯಬಹುದಾಗಿದೆ.
Advertisement
ನಿರಂತರ ಮಳೆಯಿಂದ ಸಂಪರ್ಕ ಕಡಿತ ಹಲವು ದಿನ ಮುಂದುವರಿದರೆ, ಈ ಪ್ರದೇಶದ ವಾಸಿಸುವ ಜನರಿಗೆ ಅಗತ್ಯ ವಸ್ತುಗಳನ್ನು ಒದಗಿಸಬೇಕಾಗಿ ಗ್ರಾಮದ ನಿವಾಸಿಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತವಾಗಿ ಭಾರಿ ಮಳೆಯಾಗುತ್ತಿರುವುದರಿಂದ ಈ ವ್ಯಾಪ್ತಿಯ ಕಕ್ಕಟ್ ಪೆÇಳೆ ನದಿ ತುಂಬಿ ಹರಿಯುತ್ತಿದೆ. ಅಲ್ಲದೇ ಲಕ್ಷ್ಮಣ ತೀರ್ಥ, ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿದೆ.
Advertisement
ಇತ್ತ ಮಡಿಕೇರಿಯಲ್ಲಿ ಕಳೆದ ರಾತ್ರಿಯಿಂದ ಮಳೆಯ ಅರ್ಭಟ ಕೊಂಚ ಕಡಿಮೆಯಾಗಿದ್ದು, ಗುಡ್ಡಗಾಡು ಪ್ರದೇಶದ ಜನರು ನಿಟ್ಟುಸಿರು ಬೀಡುವಂತೆ ಅಗಿದೆ. ಕಾವೇರಿ ನದಿ ಪಾತ್ರದ ಜನರಲ್ಲಿ ನೀರಿನ ಪ್ರಮಾಣದ ಏರಿಕೆ ಅಗುತ್ತಿರುವುದರಿಂದ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಅತಂಕ ಹೆಚ್ಚುವಂತೆ ಅಗಿದೆ.
ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇತ್ತ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾಶಯದ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು ಅಗಿದ್ದು, ಇಂದಿನ ನೀರಿನ ಮಟ್ಟ 2853.53 ಅಡಿಗಳು ಇದೆ. ಇಂದಿನ ನೀರಿನ ಒಳಹರಿವು 5,056 ಕ್ಯೂಸೆಕ್ ಹಾಗೂ ಹೊರ ಹರಿವು ನದಿಗೆ 4,104 ಕ್ಯೂಸೆಕ್ ಬೀಡಲಾಗುತ್ತಿದೆ. ಪಕ್ಕದ ಮೈಸೂರಿನ ಕೆಆರ್ಎಸ್ಗೆ ಇದು ವರದಾನವಾಗಲಿದೆ.