ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ ರಾಜೀನಾಮೆ ನೀಡುವುದರ ಕುರಿತು ಸುಳಿವು ನೀಡಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ಕೈ ಸೇರಿದೆ ವರದಿ – ಜಾತಿ ಚೌಕಟ್ಟು ಮೀರುತ್ತಾ ಬಿಜೆಪಿ?
Advertisement
Advertisement
ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಜುಲೈ 25ರ ನಂತರ ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿದ್ದೇನೆ ಎಂದರು. ಇದನ್ನೂ ಓದಿ: ನನ್ನ ಪರವಾಗಿ ಯಾರೂ ಪ್ರತಿಭಟನೆಗೆ ಮುಂದಾಗಬಾರದು – ಬಿಎಸ್ವೈ ಮನವಿ
Advertisement
ಕೆಲಸ ಮೆಚ್ಚಿ ವರಿಷ್ಠರು 75 ವರ್ಷ ಆದ ಬಳಿಕ 78 ರವರೆಗೂ ಅಧಿಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಮುಂದೆ ಪಕ್ಷ ಮತ್ತೆ ಅಧಿಕಾರಕ್ಕೆ ತರೋದು ನನ್ನ ಸಂಕಲ್ಪ. 26 ಕ್ಕೆ ಸರ್ಕಾರದ ಸಾಧನೆ ಬಗ್ಗೆ ವಿಶೇಷ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈ ಕಾರ್ಯಕ್ರಮ ಬಳಿಕ ವರಿಷ್ಠರ ಸೂಚನೆಯಂತೆ ನಡ್ಕೋತೇನೆ. ವರಿಷ್ಠರ ತೀರ್ಮಾನವೇ ನನ್ನ ತೀರ್ಮಾನ ಎಂದು ಬಿಎಸ್ವೈ ತಿಳಿಸಿದರು.