– ಎರಡು ಹುಲಿ ಉಗುರು ವಶ, ಇಬ್ಬರ ಬಂಧನ
ಚಾಮರಾಜನಗರ: ಹುಲಿ ಉಗುರುಗಳನ್ನು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿರುವ ಸಿಐಡಿ ಅರಣ್ಯ ಸಂಚಾರಿ ದಳ ಪೊಲೀಸರು, ಎರಡು ಹುಲಿ ಉಗುರುಗಳನ್ನು ವಶಪಡಿಸಿಕೊಂಡಿದ್ದಾರೆ.
ಕೊಳ್ಳೇಗಾಲದ ನಾರಾಯಣಿ ಹಾಗೂ ನಯೀಮ್ ಪಾಷಾ ಎಂಬುವರು ಹುಲಿ ಉಗುರು ಮಾರಾಟ ಮಾಡಲು ಆಟೋದಲ್ಲಿ ತೆರಳುತ್ತಿದ್ದರು. ಆದರೆ ಅಣಗಳ್ಳಿ ಬಳಿ ಎದುರಿನಿಂದ ಬರುತ್ತಿದ್ದ ಸಿಐಡಿ ಅರಣ್ಯ ಸಂಚಾರಿ ದಳದ ಜೀಪ್ ಕಂಡೊಡನೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ಆಟೋ ನಿಲ್ಲಿಸಿ ವಿಚಾರಣೆ ನಡೆಸಿದಾಗ ಹುಲಿ ಉಗುರು ಮಾರಾಟ ಮಾಡಲು ಕೊಂಡೊಯ್ಯುತ್ತಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ.
Advertisement
Advertisement
ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಗುರಿಪಡಿಸಿದಾಗ, ಕೊರಳಿಗೆ ಹಾಕಿಕೊಳ್ಳುವ ಡಾಲರ್ ಮಾಡಿಸಿಕೊಳ್ಳಲು ಮೂರು ತಿಂಗಳ ಹಿಂದೆ ವ್ಯಕ್ತಿಯೊಬ್ಬನಿಂದ ಎರಡು ಹುಲಿ ಉಗುರುಗಳನ್ನು 20 ಸಾವಿರ ರೂಪಾಯಿಗೆ ಖರೀದಿಸಿದ್ದಾಗಿ ನಾರಾಯಣಿ ತಿಳಿಸಿದ್ದಾನೆ. ಆದರೆ ಈಗ ಹಣಕಾಸಿನ ತೊಂದರೆ ಇದ್ದುದ್ದರಿಂದ ಅವುಗಳನ್ನು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದಾನೆ ಎಂದು ತಿಳಿಸಿದ್ದಾನೆ.
Advertisement